Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದಸರಾ ರಜೆಯ ಅವಧಿಯಲ್ಲಿ ಶಿಕ್ಷಕರಿಂದ ಜಾತಿವಾರು ಸಮೀಕ್ಷೆ ಸಾಧ್ಯತೆ

Advertisement
ಬೆಂಗಳೂರು: ಈ ವರ್ಷದ ದಸರಾ ರಜೆಯ ಅವಧಿಯಲ್ಲಿ ಶಾಲಾ ಶಿಕ್ಷಕರ ಮೂಲಕ ಜಾತಿವಾರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಬಗ್ಗೆ ಹಿಂದುಳಿದ ವರ್ಗಗಳ ಆಯೋಗವು ಸಿದ್ಧತೆ ನಡೆಸಿದೆ. ಈ ಬಗ್ಗೆ ಖಚಿತ ಮೂಲಗಳು ಮಾಹಿತಿ ನೀಡಿರುವುದು ಈಗ ಶಿಕ್ಷಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

'ಸರ್ಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರ ಮೂಲಕ ನಡೆಸಿದ ಇಂತಹ ಸಮೀಕ್ಷೆಗಳು ಕರಾರುವಾಕ್ಕಾಗಿ ಇದ್ದ ನಿದರ್ಶನಗಳು ಸಾಕಷ್ಟಿವೆ. ಹೀಗಾಗಿ ಶಿಕ್ಷಕರನ್ನೇ ಈ ಸಮೀಕ್ಷೆಗೆ ಬಳಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಲಾಗಿದೆ' ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಜಿ. ನಾಯಕ್ ಮಾಹಿತಿ ನೀಡಿದ್ದಾರೆ.

'ಸಮೀಕ್ಷೆಯ ಪ್ರಶ್ನಾವಳಿಯು ಬಹುತೇಕ ಸಿದ್ಧವಾಗಿದೆ. ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಲಾಗುತ್ತಿದೆ. ದಸರಾ ಸಂದರ್ಭದಲ್ಲಿ ಶಾಲೆಗಳಿಗೆ 15 ದಿನ ರಜೆ ಇರುತ್ತದೆ. ಅದನ್ನು ಇನ್ನೂ ಹತ್ತು ದಿನ ವಿಸ್ತರಿಸಿ, ಒಟ್ಟು 25 ದಿನಗಳಲ್ಲಿ ಸಮೀಕ್ಷೆ ನಡೆಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುತ್ತದೆ' ಎಂದು ಅವರು ತಿಳಿಸಿದ್ದಾರೆ.

ಸರ್ಕಾರವು ಸಮೀಕ್ಷೆಗೆ ಶಿಕ್ಷಕರನ್ನು ಒದಗಿಸದೇ ಇದ್ದರೆ, ಆಶಾ ಕಾರ್ಯಕರ್ತರು ಮತ್ತು ಕಂದಾಯ ವಸೂಲಿಗಾರರನ್ನು ಬಳಸಿಕೊಳ್ಳಬೇಕಾಗುತ್ತದೆ. ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಒದಗಿಸಲು ನಡೆಸಲಾದ ಸಮೀಕ್ಷೆಯ ದತ್ತಾಂಶಗಳನ್ನೂ ಬಳಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ