Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅರಣ್ಯ ಪ್ರದೇಶದಲ್ಲಿ ದನ-ಕರುಗಳನ್ನು ಮೇಯಿಸುವುದು ನಿರ್ಬಂಧ ?

Advertisement
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶದೊಳಗೆ ಹಸು-ಕರು, ಮೇಕೆ, ಕುರಿ ಮತ್ತಿತರ ಜಾನುವಾರುಗಳನ್ನು ಮೇಯಿಸುವುದಕ್ಕೆ ನಿಷೇಧ ಹೇರಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೇ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯ ಪಟ್ಟಿದ್ದಾರೆ ಎಂದು ಖಂಡ್ರೆ ಹೇಳಿದ್ದಾರೆ.

ಕಾಡಿನಲ್ಲಿರುವ ವನ್ಯಜೀವಿಗಳು ಮೇಯಲು ಹೋದ ದನಕರುಗಳನ್ನು ಕೊಂದಾಗ, ಆಕ್ರೋಶಗೊಂಡು ಕೆಲವರು ಮೃತ ಜಾನುವಾರುಗಳಿಗೆ ವಿಷ ಹಾಕುವ ಕಾರಣ ವನ್ಯಜೀವಿಗಳು ಸಾವಿಗೀಡಾಗುತ್ತವೆ. ಇದಕ್ಕೆ ಇತ್ತೀಚೆಗೆ ಹೂಗ್ಯಂ ವಲಯದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ಸಾವಿಗೀಡಾಗಿರುವುದೇ ಸಾಕ್ಷಿಯಾಗಿದೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯಟ್ಟಿದ್ದಾರೆ ಎಂದು ಅವರು ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.

ದೊಡ್ಡ ಸಂಖ್ಯೆಯ ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಾಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಮಿಗಿಲಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ಒಳಗಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಅವರು ಉಲ್ಲೇಖಿಸಿದ್ದಾರೆ.

ಅರಣ್ಯ ಸಂವರ್ಧನೆಯಾಗದಿದ್ದರೆ ಅದು ಆ ಅರಣ್ಯದಲ್ಲಿ ಹರಿಯುವ ನದಿಗಳ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗುತ್ತದೆ. ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ ನಿಯಮದಲ್ಲಿ ಅವಕಾಶವಿಲ್ಲ. ಆದ್ದರಿಂದ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು ಮತ್ತು ಪರಿಸರವಾದಿಗಳು ಅಭಿಪ್ರಾಯಪಟ್ಟಿದ್ದಾರೆ. ಆದ ಕಾರಣ ಈ ಬಗ್ಗೆ ಪರಿಶೀಲಿಸಿ ಕಾನೂನು ರೀತ್ಯ ಕ್ರಮವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ