Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕುಮಾರಸ್ವಾಮಿ ಬಡಾವಣೆಯಲ್ಲಿ ಶಿವ - ಬಸವಣ್ಣನವರ ಜಯಂತಿ ಆಚರಣೆ ಸಮಾನತೆಯ ಸಂದೇಶ ಸಾರಿದ ಮಾನವತಾವಾದಿ ವಿಶ್ವಗುರು ಬಸವಣ್ಣ: ರುದ್ರಣ್ಣ ಚಂದರಗಿ

ಬೆಳಗಾವಿ: 12ನೇ ಶತಮಾನದ ವಿಶ್ವಗುರು ಬಸವಣ್ಣನವರು ಸಮಾನತೆ, ಕಾಯಕ ನಿಷ್ಠೆ, ಮತ್ತು ಸಹೋದರತೆಯನ್ನು ಸಾರಿದ ಮಹಾನ್ ಚೇತನ. ಅವರು ಅನುಭವ ಮಂಟಪದ ಮೂಲಕ ಸರ್ವರಿಗೂ ಸಮಾನ ಅವಕಾಶ, ಅಂತರ್ಜಾತಿ ವಿವಾಹ, ಮಹಿಳಾ ಸಬಲೀಕರಣ, ಮತ್ತು ಕಾಯಕವೇ ಕೈಲಾಸ ಎಂಬ ತತ್ವ ಸಾರಿದವರು ಎಂದು ಬಿಜೆಪಿ ಮುಖಂಡ, ಎಚ್‌.ಡಿ.ಕುಮಾರಸ್ವಾಮಿ ಬಡಾವಣೆಯ ರಹವಾಸಿ ಸಂಘದ ಅಧ್ಯಕ್ಷ ರುದ್ರಣ್ಣ ಚಂದರಗಿ ಹೇಳಿದರು.

ನಗರದ ಎಚ್‌.ಡಿ.ಕುಮಾರಸ್ವಾಮಿ ಬಡಾವಣೆಯ ರಹವಾಸಿ ಸಂಘದಿಂದ ಸೋಮಮವಾರ ನಡೆದ ಶಿವ ಮತ್ತು ಬಸವಣ್ಣನವರ ಜಯಂತಿ ಪ್ರಯುಕ್ತ , ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ವಿಶ್ವಗುರು ಬಸವಣ್ಣನವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಕಾಯಕವೇ ಕೈಲಾಸ" ಎಂಬ ಮಂತ್ರದಡಿ ಸಮಾನತೆಯ ಸಮಾಜಕ್ಕಾಗಿ ಬದುಕಿದ ಬಸವಣ್ಣನವರ ತತ್ವಗಳು ನಮಗೆ ಸದಾ ದಾರಿದೀಪ. ಎಲ್ಲರೂ ಒಂದು ಕಲ್ಯಾಣ ರಾಜ್ಯ ಕಟ್ಟಿದ ಮಹಾನ್‌ ಚೇತನ, ಹೀಗಾಗಿ. ಅವರ ಆದರ್ಶಗಳನ್ನು ಪಾಲಿಸಿದರೊಂದಿಗೆ ಸಾಮಾಜಿಕ ನ್ಯಾಯ ಮತ್ತು ಮೌಲ್ಯಾಧಾರಿತ ಜೀವನ ನಡೆಸಬೇಕು ಎಂದು ಹೇಳಿದರು.

ಧೈರ್ಯ, ಶೌರ್ಯ ಹಾಗೂ ಧೀಮಂತ ವ್ಯಕ್ತಿತ್ವಕ್ಕೆ ಹೆಸರುವಾಸಿಯಾಗಿದ್ದ ಛತ್ರಪತಿ ಶಿವಾಜಿ ಅವರ ಆಡಳಿತ ಕೌಶಲ್ಯಗಳು ಅವರ ದೂರದೃಷ್ಟಿಯ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ಚಿಕ್ಕ ವಯಸಿನಲ್ಲಿಯೇ ಆಸಾಧಾರಣ ನಾಯಕತ್ವ ಗುಣಗಳನ್ನು ಹೊಂದಿದ್ದ ಶಿವಾಜಿಯ ಆಡಳಿತವು ಪ್ರಗತಿಪರ ನೀತಿ ಹಾಗೂ ದಕ್ಷ ಆಡಳಿತದಿಂದ ಗುರುತಿಸಲಟ್ಟಿದೆ. ಜಾತಿ, ಧರ್ಮ, ಬೇಧಗಳನ್ನು ಮೀರಿ ಸಮಗ್ರ ಆಡಳಿತಕ್ಕೆ ಉತ್ತೇಜನ ನೀಡಿದ್ದರು ಛತ್ರಪತಿ ಶಿವಾಜಿ ಮಹಾರಾಜರು. ಅವರ ಆದರ್ಶ ಮೈಗೂಡಿಸಿಕೊಂಡು ಸಮಾಜ ಕಟ್ಟುವ ಕೆಲಸ ಮಾಡಬೇಕು ನಾವೆಲ್ಲರೂ ಒಂದೇ ಎನ್ನುವ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಮಲ್ಲಿಕಾರ್ಜುನ ರೊಟ್ಟಿ, ಶಿವಪುತ್ರ ಗಂಗಾಪುರ, ವಿರುಪಾಕ್ಷಿ ನೀರಲಗಿಮಠ ಮಹಾದೇವ ಹೊಂಗಲ, ಲಕ್ಷ್ಮಣ ಅಕ್ಕನವರ, ಮಹಾದೇವ ಭೀಮ ನಾಯಕ, ಶಿವಪುತ್ರ ಪಟಕಳ, ವಿರುಪಾಕ್ಷಿ ನೀರಲಗಿಮಠ, ಶೋಭಾ ಹೊಸಮಠ, ಸುಧಾ ರೊಟ್ಟಿ ಮತ್ತು ಮಹಿಳಾ ಮಂಡಳ ಸದಸ್ಯರು ಸೇರಿದಂತೆ ಇತರರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಪೊಲೀಸರ ಬೇಜವಾಬ್ದಾರಿಗೆ ಮೊಮ್ಮಗನಿಂದಲೇ ಕೊಲೆಯಾದ ಅಜ್ಜಿ..!ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ; 68 ಪ್ರಯಾಣಿಕರ ಸ್ಥಳಾಂತರವಿದೇಶಕ್ಕೆ ತೆಗೆದುಕೊಂಡು ಹೋಗಿದ್ದ ಸಾವಿರ ವರ್ಷಗಳ ಹಿಂದಿನ ತಾಮ್ರ ಶಾಸನಕ್ಕೆ ಕೊನೆಗೂ ಭಾರತಕ್ಕೆ ವಾಪಸ್..!ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು