Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

2026ರ ಏಪ್ರಿಲ್ 1ರಿಂದ ಜನಗಣತಿ ಆರಂಭ

ನವದೆಹಲಿ: ಮುಂಬರುವ ಜನಗಣತಿಗಾಗಿ ಮನೆಗಳ ಪಟ್ಟಿ ಮಾಡುವ ಕಾರ್ಯಾಚರಣೆ (ಎಚ್‌ಎಲ್‌ಒ) 2026ರ ಏ. 1ರಂದು ಪ್ರಾರಂಭವಾಗಲಿದೆ.

ಮನೆ ಪಟ್ಟಿ ಕಾರ್ಯಾಚರಣೆಯೊಂದಿಗೆ ಜನಗಣತಿಯ ಮೊದಲ ಹಂತಕ್ಕೆ ಚಾಲನೆ ದೊರೆಯಲಿದೆ ಎಂದು ರಿಜಿಸ್ಟ್ರಾರ್ ಜನರಲ್ ಮತ್ತು ಭಾರತದ ಜನಗಣತಿ ಆಯುಕ್ತ ಮೃತ್ಯುಂಜಯ್ ಕುಮಾರ್ ನಾರಾಯಣ್ ತಿಳಿಸಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಈ ಬಗ್ಗೆ ಪತ್ರ ಬರೆದಿದ್ದು, 'ಮೊದಲ ಹಂತದ ಆರಂಭಕ್ಕೂ ಮುನ್ನ ಗಣತಿದಾರರು ಮತ್ತು ಮೇಲ್ವಿಚಾರಕರ ನೇಮಕಾತಿ ಹಾಗೂ ಅವರಿಗೆ ಕೆಲಸದ ಹಂಚಿಕೆಯನ್ನು ರಾಜ್ಯ ಸರ್ಕಾರಗಳು ಮತ್ತು ಜಿಲ್ಲಾಡಳಿತದ ಸಹಕಾರದೊಂದಿಗೆ ಮಾಡಲಾಗುತ್ತದೆ' ಎಂದಿದ್ದಾರೆ.

ಜನಗಣತಿ ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಮನೆ ಪಟ್ಟಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತದೆ. ಇಲ್ಲಿ ದೇಶದ ಪ್ರತಿಯೊಂದು ಕಟ್ಟಡಕ್ಕೆ ಭೇಟಿ ನೀಡಿ ಕಟ್ಟಡಗಳು ಮತ್ತು ಮನೆಗಳ ಗುಣಲಕ್ಷಣಗಳನ್ನು ದಾಖಲಿಸಲಾಗುತ್ತದೆ.

ಜನಗಣತಿ ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಮನೆ ಪಟ್ಟಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತದೆ. ಇಲ್ಲಿ ದೇಶದ ಪ್ರತಿಯೊಂದು ಕಟ್ಟಡಕ್ಕೆ ಭೇಟಿ ನೀಡಿ ಕಟ್ಟಡಗಳು ಮತ್ತು ಮನೆಗಳ ಗುಣಲಕ್ಷಣಗಳನ್ನು ದಾಖಲಿಸಲಾಗುತ್ತದೆ.

ಪ್ರತಿ ಮನೆಯಲ್ಲಿರುವ ಸ್ವತ್ತುಗಳ ದತ್ತಾಂಶ ಸಂಗ್ರಹಿಸಲಾಗುವುದು.
ಎರಡನೇ ಹಂತದಲ್ಲಿ ಜನಸಂಖ್ಯಾ ಗಣತಿ ನಡೆಯುತ್ತದೆ.

ಇಲ್ಲಿ ಪ್ರತಿಯೊಬ್ಬರ ವೈಯಕ್ತಿಕ ದತ್ತಾಂಶಗಳ ಮೇಲೆ ಗಮನ ಕೇಂದ್ರೀಕರಿಸಿ, ಮಾಹಿತಿ ಕಲೆ ಹಾಕಲಾಗುತ್ತದೆ.

ಸ್ವಾತಂತ್ರ್ಯಾ ನಂತರ ಮೊದಲ ಬಾರಿಗೆ ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ನಡೆಸಲು ಕೇಂದ್ರ ಸರ್ಕಾರ ಈಗಾಗಲೇ ಅಧಿಸೂಚನೆ ಹೊರಡಿಸಿದೆ.

ಜನಗಣತಿ ಪ್ರಕ್ರಿಯೆಗೆ 34 ಲಕ್ಷ ಗಣತಿದಾರರು ಮತ್ತು ಮೇಲ್ವಿಚಾರಕರು ಹಾಗೂ 1.3 ಲಕ್ಷ ಅಧಿಕಾರಿಗಳನ್ನು ನಿಯೋಜಿಸಲಾಗುತ್ತದೆ. ದೇಶದಲ್ಲಿ ಮೊದಲ ಡಿಜಿಟಲ್ ಜನಗಣತಿಯಾಗಲಿರುವ ಈ ಪ್ರಕ್ರಿಯೆಯು ನಾಗರಿಕರಿಗೆ ಸ್ವಯಂ-ಗಣತಿಗೆ ಒಳಪಡಲು ಅವಕಾಶ ನೀಡುತ್ತದೆ.

ಆಡಳಿತಾತ್ಮಕ ಪ್ರದೇಶಗಳ ಗಡಿಗಳಲ್ಲಿ ಬದಲಾವಣೆ ಪ್ರಸ್ತಾವಗಳಿದ್ದರೆ 2025ರ ಡಿಸೆಂಬರ್ 31ರೊಳಗೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಿಜಿಸ್ಟ್ರಾರ್ ಜನರಲ್ ಸೂಚಿಸಿದ್ದಾರೆ. 'ಜನಗಣತಿ ಪ್ರಕ್ರಿಯೆಗಾಗಿ ಎಲ್ಲ ಗ್ರಾಮಗಳು ಮತ್ತು ಪಟ್ಟಣಗಳನ್ನು ಏಕರೂಪದ ಬ್ಲಾಕ್‌ಗಳಾಗಿ ವಿಂಗಡಿಸಲಾಗುವುದು. ಎಣಿಕೆಯ ಸಮಯದಲ್ಲಿ ಲೋಪ ಅಥವಾ ಪುನರಾವರ್ತನೆ ಆಗುವುದನ್ನು ತಪ್ಪಿಸಲು ಪ್ರತಿ ಬ್ಲಾಕ್‌ಗೆ ಒಬ್ಬ ಗಣತಿದಾರರನ್ನು ನಿಯೋಜಿಸಲಾಗುವುದು' ಎಂದು ಹೇಳಿದ್ದಾರೆ. ನಿಯಮಗಳ ಪ್ರಕಾರ ಜಿಲ್ಲೆಗಳು ಉಪ ವಿಭಾಗಗಳು ತಾಲ್ಲೂಕುಗಳು ಮತ್ತು ಪೊಲೀಸ್‌ ಠಾಣೆಗಳಂತಹ ಆಡಳಿತಾತ್ಮಕ ಪ್ರದೇಶಗಳ ಗಡಿ ಮಿತಿಗಳನ್ನು ಅಂತಿಮಗೊಳಿಸಿದ ಮೂರು ತಿಂಗಳ ನಂತರವೇ ಜನಗಣತಿ ನಡೆಸಬಹುದು. ಜನಗಣತಿ ನಡೆಯುವ ಅವಧಿಯಲ್ಲಿ (2026ರ ಜ.1 ರಿಂದ 2027ರ ಮಾರ್ಚ್ 31ರ ವರೆಗೆ) ಆಡಳಿತಾತ್ಮಕ ಪ್ರದೇಶಗಳ ಗಡಿಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡದಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ