Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಪುನರ್ ಪರಿಶೀಲನೆ- ಸಂಸದ ಜಗದೀಶ ಶೆಟ್ಟರ್ ಸಂತಸ

ಬೆಳಗಾವಿ : ಲೋಕಾಪುರ-ರಾಮದುರ್ಗ-ಸವದತ್ತಿ-ಧಾರವಾಡಗಳ ನಡುವೆ ನೂತನ ರೈಲು ಮಾರ್ಗ ನಿರ್ಮಾಣದ ಮುಂಚಿತವಾಗಿ ನಡೆಸಲಾಗುವ "ಸಾಮಾನ್ಯ ಸಮೀಕ್ಷೆ" ವಿಷಯವನ್ನು ಮತ್ತೊಮ್ಮೆ ಅಂದರೆ ಪುನರ್ ಪರಿಶೀಲನೆ ಮಾಡುವ ಬಗ್ಗೆ ಸ್ಪಷ್ಟ ನಿರ್ದೇಶವನ್ನು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೇಲ್ವೆ ಬೋರ್ಡ್ ಗೆ ಸಂಬಂಧಿಸಿದ ವಿಭಾಗಕ್ಕೆ ನೀಡಲಾದ ಕುರಿತು ಪತ್ರ ಬರೆದು ತಮಗೆ ತಿಳಿಸಿದ ಬಗ್ಗೆ ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸಂತಸ ವ್ಯಕ್ತ ಪಡಿಸಿಸಿದ್ದಾರೆ.

ಪ್ರಸ್ತಾಪಿತ ಲೋಕಾಪುರ-ರಾಮದುರ್ಗ-ಸವದತ್ತಿ-ಧಾರವಾಡಗಳ ನಡುವೆ ನೂತನ ರೈಲು ಮಾರ್ಗ ನಿರ್ಮಾಣದ ಬಗ್ಗೆ ಈ ಮೊದಲು ರೇಲ್ವೆ ಅಧಿಕಾರಿಗಳು, ಕರೋನಾ-19 (ಮಹಾಮಾರಿ) ಸಮಯದಲ್ಲಿ ಸಾಮಾನ್ಯ ಸಮೀಕ್ಷೆ ನಡೆಸಿ, ತದನಂತರ ಈ ಮಾರ್ಗ ನಿರ್ಮಾಣ ಕಾರ್ಯಸಾಧ್ಯತೆ ಅನುಮಾನದಾಯಕವೆಂದು ಉಲ್ಲೇಖಿಸಿ ವರದಿ ನೀಡಿದ್ದು ಇಲ್ಲಿ ಸ್ಮರಣೀಯ.

ಆದರೆ ಬೆಳಗಾವಿ ಸಂಸದರಾಗಿ ಚುನಾಯಿತಗೊಂಡ ನಂತರದಲ್ಲಿ ಈ ನೂತನ ಮಾರ್ಗ ನಿರ್ಮಾಣದ ಬಗ್ಗೆ ಸತ್ಯಾಸತ್ಯತೆಯ ಬಗ್ಗೆ ಸಾಕಷ್ಟು ಮಾಹಿತಿ ಪಡೆದು ಈ ಮಾರ್ಗ ನಿರ್ಮಾಣ ಅತೀ ಅವಶ್ಯಕವಾಗಿದ್ದು, ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದರ್ಶನಕ್ಕೆಂದು ಪ್ರತಿ ವರ್ಷ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗೆ ಇದು ಖಂಡಿತವಾಗಿ ಅನುಕೂಲಕರವಾಗಲಿದೆ ಎಂದು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ರೇಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ ಜೋಶಿ ಇವರ ಉಪಸ್ಥಿತಿಯಲ್ಲಿ ಮತ್ತು ಅವರ ಸಹಕಾರದೊಂದಿಗೆ ಇದರ ಮನವರಿಕೆಯನ್ನು ಯಶಸ್ವಿಯಾಗಿ ಮಾಡಿಕೊಟ್ಟ ಪರಿಣಾಮವಾಗಿ ಸದ್ಯ ರೇಲ್ವೆ ಬೋರ್ಡ್ ಸಂಬಂಧಿಸಿದ ವಿಭಾಗಕ್ಕೆ ಈ ಪ್ರಸ್ತಾಪಿತ ಮಾರ್ಗದಲ್ಲಿ ಸಾಮಾನ್ಯ ಸಮೀಕ್ಷೆ ನಡೆಸುವ ಬಗ್ಗೆ ವಿಷಯ ಪರಿಗಣಿಸುವ ಕುರಿತು ಸ್ಪಷ್ಟ ನಿರ್ದೇಶನ ನೀಡಿದೆ. ಈ ಹಿನ್ನಲೆಯಲ್ಲಿ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ಅಭಿಪ್ರಾಯ ವ್ಯಕ್ತ ಪಡಿಸಿಸುತ್ತಾ, ಈ ನೂತನ ರೈಲು ಮಾರ್ಗ ನಿರ್ಮಾಣ ಸಾಮಾನ್ಯ ಸಮೀಕ್ಷೆ ಕಾರ್ಯವನ್ನು ರೇಲ್ವೆ ಅಧಿಕಾರಿಗಳು ಬಹು ಬೇಗನೆ ಆರಂಭಿಸುವ ಬಗ್ಗೆ ವಿಶ್ವಾಸವಿರುವ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಪ್ರಸ್ತಾಪಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ