Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೆಲವೆಡೆ ಮಳೆ ಸಾಧ್ಯತೆ

 

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇನ್ನೂ ಕರಾವಳಿಐಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಜತೆಗೆ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ರಾಯಚೂರು ಹಾಗೂ ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯನಗರ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿರಲಿದೆ.

ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌
ಭಾರೀ ಮಳೆಯೊಂದಿಗೆ ಗುಡುಗು ಸಹಿತ ಬಿರುಗಾಳಿ (ಗಂಟೆಗೆ 40-50 ಕಿ.ಮೀ) ಬೀಸಲಿದೆ. ಹೀಗಾಗಿ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಿದೆ. ಮುಖ್ಯವಾಗಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ