Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೆಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕೆಲವೆಡೆ ಗುರುವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಐದು ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್‌' ಘೋಷಿಸಿದೆ.

ಬೀದ‌ರ್, ಕಲಬುರಗಿ, ವಿಜಯಪುರ, ಬೆಳಗಾವಿ ಹಾಗೂ ಗದಗ ಜಿಲ್ಲೆಗೆ 'ಯೆಲ್ಲೊ ಅಲರ್ಟ್' ನೀಡಲಾಗಿದ್ದು, ಈ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಭಾರಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಕರಾವಳಿಯಲ್ಲಿ ದಕ್ಷಿಣ ಕನ್ನಡದ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಕೊಡಗು, ಮೈಸೂರು, ಬಳ್ಳಾರಿ, ವಿಜಯನಗರ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕೆಲವೆಡೆ ಮಳೆಯಾಗಿದೆ. ಚಾಮರಾಜನಗರದ ಬಂಡೀಪುರದಲ್ಲಿ 3 ಸೆಂ.ಮೀ. ಮಳೆ ಸುರಿದರೆ, ಉತ್ತರ ಕನ್ನಡದ ಯಲ್ಲಾಪುರ, ಮೈಸೂರಿನ ಸುತ್ತೂರು ಹಾಗೂ ಗದಗದ ಶಿರಹಟ್ಟಿಯಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ. ಮಂಡ್ಯದ ಮದ್ದೂರು ಸೇರಿ ಕೆಲವೆಡೆ 1 ಸೆಂ.ಮೀ. ಹಾಗೂ ಅದಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ