Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ ಚಂದ್ರಬಾಬು ನಾಯ್ಡು

 

ವಿಜಯವಾಡ : ಟಿಡಿಪಿ ಮುಖ್ಯಸ್ಥ, ನಿಯೋಜಿತ ಸಿಎಂ ನಾರಾ ಚಂದ್ರಬಾಬು ನಾಯ್ಡು ಅವರು ಮಂಗಳವಾರ ವಿಜಯವಾಡದಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಅಮರಾವತಿ ಆಂಧ್ರಪ್ರದೇಶದ ರಾಜಧಾನಿಯಾಗಲಿದೆ ಎಂದು ಘೋಷಿಸಿದ್ದಾರೆ.

ಎ-ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಟಿಡಿಪಿ, ಬಿಜೆಪಿ ಮತ್ತು ಪವನ್‌ ಕಲ್ಯಾಣ ನೇತೃತ್ವದ ಜನಸೇನಾ ಪಾರ್ಟಿಯ ಶಾಸಕರು ಪಾಲ್ಗೊಂಡಿದ್ದರು. ಈ ವೇಳೆ ಮುಖ್ಯಮಂತ್ರಿ ಹುದ್ದೆಗೆ ಚಂದ್ರಬಾಬು ನಾಯ್ಡು ಅವರ ಹೆಸರನ್ನು ಪವನ್‌ ಕಲ್ಯಾಣ ಪ್ರಸ್ತಾಪಿಸಿದರು. ಇದಕ್ಕೆ ಬಿಜೆಪಿಯ ಡಿ.ಪುರಂದರೇಶ್ವರಿ ಬೆಂಬಲ ಸೂಚಿಸಿದರು. ಬಳಿಕ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ನಂತರ ಸಭೆಯನ್ನುದ್ದೇಶಿಸಿ ಮಾತನಾಡಿ ಚಂದ್ರಬಾಬು ನಾಯ್ಡು ಅವರು, ʼಅಮರಾವತಿ ಆಂಧ್ರ ಪ್ರದೇಶದ ರಾಜಧಾನಿಯಾಗಲಿದೆ. ನಾವು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಕೆಲವು ಭಾಗಗಳನ್ನು ಮಾತ್ರವಲ್ಲ ಇಡೀ ರಾಜ್ಯದ ಏಳಿಗೆಗೆ ಕೊಡುಗೆ ನೀಡುತ್ತೇವೆ ಎಂದು ಅವರು ಭರವಸೆ ನೀಡಿದರು.

ಈ ಮೂಲಕ ನಿರ್ಗಮಿತ ಮುಖ್ಯಮಂತ್ರಿ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು. ವೈಎಸ್‌ಆರ್‌ಸಿಪಿ ಮುಖಂಡ, ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಅವರು ಈ ಹಿಂದೆ ವಿಶಾಖಪಟ್ಟಣಂ ಅನ್ನು ಆಡಳಿತಾತ್ಮಕ ರಾಜಧಾನಿಯಾಗಿ ಅಭಿವೃದ್ಧಿಪಡಿಸುವುದಾಗಿ ಮತ್ತು ಅಲ್ಲಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದ್ದರು. ಇದನ್ನು ಪ್ರಸ್ತಾವಿಸಿದ ಚಂದ್ರಬಾಬು ನಾಯ್ಡು, ವಿಶಾಖಪಟ್ಟಣಂನಲ್ಲಿ ವೈಎಸ್‌ಆರ್‌ಸಿಪಿಯನ್ನು ಸೋಲಿಸುವ ಮೂಲಕ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು. ಜಗನ್‌ ಮೋಹನ್‌ ರೆಡ್ಡಿ ಅವರು ಅಮರಾವತಿಯನ್ನು ಶಾಸಕಾಂಗ ರಾಜಧಾನಿಯಾಗಿ, ವಿಶಾಖಪಟ್ಟಣಂ ಅನ್ನು ಆಡಳಿತಾತ್ಮಕ ರಾಜಧಾನಿಯಾಗಿ ಮತ್ತು ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿಯನ್ನಾಗಿ ಮಾಡಿಕೊಳ್ಳುವ ಮೂಲಕ ರಾಜ್ಯದಲ್ಲಿ ವಿಕೇಂದ್ರೀಕೃತ ಅಭಿವೃದ್ಧಿಯ ಕಲ್ಪನೆಯನ್ನು ಹುಟ್ಟು ಹಾಕಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ