Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗರಗ ಕಲ್ಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ..!

*ಗರಗ ಕಲ್ಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯ*

ಧಾರವಾಡ: ಧಾರವಾಡ ತಾಲೂಕಿನ ಐತಿಹಾಸಿಕ ಗರಗ ಮಡಿವಾಳೇಶ್ವರ ಕಲ್ಮಠದ ಶ್ರೀ ಮ.ನಿ.ಪ್ರ.ಚನ್ನಬಸವ ಸ್ವಾಮೀಜಿ ನಿನ್ನೆ ಭಾನುವಾರ ಬೆಳಗಿನಜಾವ ಲಿಂಗೈಕ್ಯರಾಗಿದ್ದಾರೆ.

ಸ್ವಾಮೀಜಿಗಳಿಗೆ 88 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಸ್ವಾಮೀಜಿಗಳು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಪೂಜ್ಯರ ಅಂತ್ಯಕ್ರಿಯೆ ಇಂದು ಸೋಮವಾರ ಬೆಳಿಗ್ಗೆ 12 ಗಂಟೆಗೆ ಗರಗ ಗ್ರಾಮದ ಶ್ರೀಮಠದ ಆವರಣದಲ್ಲಿ ನಡೆಯಲಿದೆ. ಈ ಅಂತ್ಯಕ್ರಿಯೆಗೆ ನಾಡಿನ ವಿವಿಧ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ.

ಕಲ್ಮಠದ ಜವಾಬ್ದಾರಿ ಹೊತ್ತುಕೊಂಡಿದ್ದ ಚನ್ನಬಸವ ಸ್ವಾಮೀಜಿಗಳು ಮಠದ ಏಳ್ಗೆಗಾಗಿ ಹಗಲಿರುಳು ಶ್ರಮಿಸಿದ್ದರು. ಅಲ್ಲದೇ ಅನ್ನದಾನ ಹಾಗೂ ವಿದ್ಯಾದಾನಕ್ಕೆ ಒತ್ತುಕೊಟ್ಟು ಎಲೆಮರೆಯ ಕಾಯಿಯಂತೆ ಸಮಾಜ ಸೇವೆ ಮಾಡಿದ್ದರು. ಶ್ರೀಗಳ ಅಗಲಿಕೆಯಿಂದ ಗರಗ-ಹಂಗರಕಿ ಸೇರಿದಂತೆ ಇಡೀ ಧಾರವಾಡ ಜಿಲ್ಲೆಯ ಭಕ್ತಗಣ ಶೋಕಸಾಗರದಲ್ಲಿ ಮುಳುಗುವಂತಾಗಿದೆ.

*ಸಾವರ್ಜನಿಕ ದರ್ಶನಕ್ಕೆ ಸಿದ್ಧತೆ*

ಧಾರವಾಡ ಶಾಸಕರಾದ ಅಮೃತ ದೇಸಾಯಿಯವರು ಹಾಗೂ ಶ್ರೀಮಠದ ಕಾರ್ಯಾಧ್ಯಕ್ಷರಾದ ಅಶೋಕ ದೇಸಾಯಿ, ಹಿರಿಯ ಭಕ್ತರಾದ ದಯಾನಂದ ಪಾಟೀಲ ಮತ್ತು ಗರಗ-ಹಂಗರಕಿ ಗ್ರಾಮದ ಸದ್ಭಕ್ತರ ನೇತ್ರತ್ವದಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ನಿನ್ನೆ ಮಧ್ಯಾಹ್ನ 12.30 ರಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಎಲ್ಲ ಭಕ್ತರಿಗೆ ಶ್ರೀಗಳ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

*ಬೃಹತ್ ಮೆರವಣಿಗೆ*

ಇಂದು ಸೋಮವಾರ ಬೆಳಗ್ಗೆ 7.30ಕ್ಕೆ ಶ್ರೀಗಳ ಅಂತಿಮಯಾತ್ರೆಯ ಮೆರವಣಿಗೆ ಹಂಗರಕಿ ಗ್ರಾಮದಿಂದ ಹೊರಟು, ಗರಗ ಗ್ರಾಮದಲ್ಲಿ ಸಂಚರಿಸಲಿದೆ. ನಂತರ ಶ್ರೀಮಠದ ಆವರಣದಲ್ಲಿ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ಜರುಗಲಿದೆ. ಗರಗ-ಹಂಗರಕಿ ಗ್ರಾಮದ ಸದ್ಭಕ್ತರು ಗುರು-ಹಿರಿಯರು ಹಾಗೂ ಮಠಾಧೀಶರು ಶ್ರೀಗಳ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಯ ಉಸ್ತುವಾರಿ ವಹಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ