Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಕೇಂದ್ರೀಕರಣ ವ್ಯವಸ್ಥೆಗೆ ಬಲ ತುಂಬುವ ಕೆಲಸ ಮಾಡೋಣ : ಚನ್ನರಾಜ ಹಟ್ಟಿಹೊಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ ಕೊನೆಯ ಕ್ಷಣದವರೆಗೂ ಜನಸೇವೆ ಬಿಡದ ಕಾಕಾ ಸಾಹೇಬ ಪಾಟೀಲ : ಚನ್ನರಾಜ ಹಟ್ಟಿಹೊಳಿ ಸ್ಮರಣೆ

ಇಟಗಿ (ಬೆಳಗಾವಿ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬೆಳಗಾವಿ, ತಾಲೂಕಾ ಪಂಚಾಯತ್ ಖಾನಾಪುರ ಹಾಗೂ ಗ್ರಾಮ ಪಂಚಾಯತ್ ಇಟಗಿ ಇವರ ಸಂಯುಕ್ತ ಆಶ್ರಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಲಾದ ಗ್ರಾಮ ಪಂಚಾಯತ್ ಇಟಗಿಯ ನೂತನ ಕಟ್ಟಡ ಹಾಗೂ ಸಭಾ ಭವನವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ ಉದ್ಘಾಟಿಸಿದರು.

ಸರಕಾರದಿಂದ ಬಿಡುಗಡೆಯಾಗುವ ಹಣ ಮಧ್ಯವರ್ತಿಗಳಿಲ್ಲದೆ ನೇರವಾಗಿ ಗ್ರಾಮ ಪಂಚಾಯಿತಿಗೆ ತಲುಪಿದಾಗ ಯಾವುದೇ ಯೋಜನೆ ಯಶಸ್ವಿಯಾಗುತ್ತದೆ. ಗ್ರಾಮ ಪಂಚಾಯಿತಿಗಳು ವಿಕೇಂದ್ರೀಕರಣ ವ್ಯವಸ್ಥೆಯ ಅತ್ಯಂತ ಪ್ರಮುಖ ಹಂತವಾಗಿದ್ದು, ಇದಕ್ಕೆ ಬಲ ತುಂಬಿದಾಗ ಪ್ರಜಾಪ್ರಭುತ್ವ ಅರ್ಥಪೂರ್ಣವಾಗುತ್ತದೆ. ಯಾವುದೇ ಊರಿನ ಶಾಲೆ ಮತ್ತು ಪಂಚಾಯಿತಿ ಸ್ಥಿತಿ ಗತಿ ನೋಡಿದರೆ ಆ ಊರಿನ ಸ್ಥಿತಿ ಗೊತ್ತಾಗುತ್ತದೆ. ಹಾಗಾಗಿ ಇವೆರಡನ್ನು ಉತ್ತಮಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿ. ಎಲ್ಲರೂ ಸೇರಿ ಗ್ರಾಮದ ಅಭಿವೃದ್ಧಿ ಮಾಡೋಣ, ಒಳ್ಳೆಯ ಸಮಾಜ ನಿರ್ಮಾಣ ಮಾಡೋಣ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.

ಕಾರ್ಯಕ್ರಮದಲ್ಲಿ ಚನ್ನಮ್ಮನ ಕಿತ್ತೂರು ವಿರಕ್ತಮಠದ ಪರಮಪೂಜ್ಯ ಶ್ರೀ ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮಿಗಳು, ನಂದಗಡ ಹಾಗೂ ಇಟಗಿ ವಿರಕ್ತಮಠದ ಶ್ರೀ ಚನ್ನವೀರ ದೇವರು, ಅವರೊಳ್ಳಿ ಬಿಳಕಿಯ ರುದ್ರಸ್ವಾಮಿ ಮಠದ ಶ್ರೀ ಚನ್ನಬಸವ ದೇವರು, ಶಾಸಕ ವಿಠ್ಠಲ ಹಲಗೇಕರ್, ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಮೇಶ ಮೇತ್ರಿ, ವಿಜಯಕುಮಾರ್ ಕೋತಿನ, ರೂಪಾಲಿ ಬಡಕುಂದ್ರಿ, ವಿರೇಶ ಸಜ್ಜನ, ರೋಹಿಣಿ ಬಾ ಪಾಟೀಲ, ಗ್ರಾಮ ಪಂಚಾಯತ್ ಅಧ್ಯಕ್ಷ ರುದ್ರಪ್ಪ ತುರಮುರಿ, ಉಪಾಧ್ಯಕ್ಷ ರಾಜಶ್ರೀ ಹುಣಶೀಕಟ್ಟಿ ಹಾಗೂ ಸರ್ವ ಸದಸ್ಯರು, ಗ್ರಾಮದ ಗುರು ಹಿರಿಯರು, ಸುತ್ತಮುತ್ತಲಿನ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಕೊನೆಯ ಕ್ಷಣದವರೆಗೂ ಜನಸೇವೆ ಬಿಡದ ಕಾಕಾ ಸಾಹೇಬ ಪಾಟೀಲ : ಚನ್ನರಾಜ ಹಟ್ಟಿಹೊಳಿ ಸ್ಮರಣೆ

ನಿಪ್ಪಾಣಿ: ಚುನಾವಣೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಆದರೆ ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ ಅವರು ಸಂಘಟನೆ ಮತ್ತು ಜನರ ಸೇವೆಯನ್ನು ಕೊನೆಯವೆರಗೂ ಬಿಡಲಿಲ್ಲ. ಕೊನೆಯವರೆಗೂ ಜನರ ಮಧ್ಯೆ ಇದ್ದು, ತಾವೊಬ್ಬ ಸಂಘಟನಾ ಚತುರ ಎನ್ನುವುದನ್ನು ತೋರಿಸಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ನಿಪ್ಪಾಣಿಯ ಮರಾಠಾ ಮಂಡಳದ ಸಾಂಸ್ಕ್ರತಿಕ ಭವನದಲ್ಲಿ ಶುಕ್ರವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಒಬ್ಬ ನಿಜವಾದ ಕಾಯಕ ಜೀವಿಯನ್ನು ನಾವು ಕಳೆದುಕೊಂಡಿದ್ದೇವೆ. ಸಾಮಾನ್ಯರಲ್ಲಿ ಸಾಮಾನ್ಯರಾಗಿದ್ದ ಕಾಕಾ ಸಾಹೇಬ ಪಾಟೀಲ ಅವರು ಮೂರು ಬಾರಿ ವಿಧಾನ ಸಭೆ ಸದಸ್ಯರಾಗಿ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರು.
ಅತ್ಯಂತ ಸರಳ ವ್ಯಕ್ತಿಯಾಗಿದ್ದ ಅವರು ಎಲ್ಲವನ್ನೂ ಸಕಾರಾತ್ಮಕವಾಗಿ ತೆಗೆದುಕೊಳ್ಳುವ ಗುಣವಿತ್ತು. ಏನೇ ಹೇಳಿದರೂ ಮಾಡೋಣ ಎನ್ನುತ್ತಿದ್ದರು. ಅತ್ಯಂತ ಕೆಳ ಮಟ್ಟದಿಂದ ಪಕ್ಷ ಸಂಘಟನೆ ಮಾಡುತ್ತ ಬೆಳೆದ ಅವರು, ಹಲವರನ್ನು ಬೆಳೆಸಿದ್ದರು ಎಂದು ಅವರು ಹೇಳಿದರು.

ನಿಪ್ಪಾಣಿ ಭಾಗದ ನೀರಿನ ಸಮಸ್ಯೆಗೆ ಶಾಶ್ವತವಾಗಿ ಮುಕ್ತಿ ನೀಡಿದವರು ಕಾಕಾ ಪಾಟೀಲ. ಕಾಳಮ್ಮವಾಡಿ ಜಲಾಶಯ ಒಪ್ಪಂದದ ಮೂಲಕ ನಿಪ್ಪಾಣಿಗೆ ನೀರು ಸಿಗುವಂತೆ ಮಾಡಿದರು.
ನಿಪ್ಪಾಣಿ ಮತಕ್ಷೇತ್ರ ಪುನರ್ ವಿಂಗಡಣೆ ವೇಳೆ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಅವರ ಪಾತ್ರ ಮುಖ್ಯವಾಗಿದೆ. ನಿಪ್ಪಾಣಿ ತಾಲೂಕು ಆಗುವುದಕ್ಕೆ ಕೂಡ ಸಾಕಷ್ಟು ಶ್ರಮ ಹಾಕಿದ್ದರು.
ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಗಟ್ಟಿಯಾದ ನೆಲೆ ಒದಗಿಸಿದ್ದರು. ಪಕ್ಷ ಸಂಘಟನೆಯ ವಿಷಯದಲ್ಲಿ ಅತ್ಯಂತ ಕಾಳಜಿ ಹೊಂದಿದ್ದರು. ನಮ್ಮ ಜೊತೆಗೆ ಅತ್ಯಂತ ಆತ್ಮೀಯ ಸಂಬಂಧ ಹೊಂದಿದ್ದ ಅವರು, ಕಳೆದ ಬಾರಿ ಲಕ್ಷ್ಮೀ ಹೆಬ್ಬಾಳಕರ್ ಅವರು ನಿಪ್ಪಾಣಿಗೆ ಆಗಮಿಸಿದ್ದ ವೇಳೆ ಕಚೇರಿಗೆ ಕರೆದೊಯ್ದು ಸನ್ಮಾನ ಮಾಡಿದ್ದರು. ಲಕ್ಷ್ಮೀ ಹೆಬ್ಬಾಳಕರ್ ಅವರು 2 ದಿನ ಮೊದಲು ಆಸ್ಪತ್ರೆಗೆ ಭೇಟಿ ನೀಡಿ ಶೀಘ್ರ ಗುಣಮುಖರಾಗಿ ಜನಸೇವೆಗೆ ಮರಳಲಿ ಎಂದು ಪ್ರಾರ್ಥಿಸಿದ್ದರು. ಆದರೆ ದುರಾದೃಷ್ಟ ಇಷ್ಟು ಬೇಗ ದೇವರು ಅವರನ್ನು ಕರೆಸಿಕೊಂಡಿದ್ದಾರೆ ಎಂದು ಕಂಬನಿ ಮಿಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಬುಡಾ ಅಧ್ಯಕ್ಷ ಲಕ್ಷ್ಮಣರಾಚ್ ಚಿಂಗಳೆ, ವೀರಕುಮಾರ ಪಾಟೀಲ, ಸುನಿಲ ಹನಮಣ್ಣವರ, ಅಜಿತ್ ಕದಂ, ಪಂಕಜ್ ಪಾಟೀಲ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.ಶ್ರೀ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ