Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಕ್ಷಾತೀತವಾಗಿ ಎಲ್ಲೆಡೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಪ್ರಶಂಸೆ - ಚನ್ನರಾಜ ಹಟ್ಟಿಹೊಳಿ

 

 

ಬೆಳಗಾವಿ:

ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯ ಘಟ್ಟದ ಮಾರ್ಗದ ರಸ್ತೆ ಅಭಿವೃದ್ಧಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ 97 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬುಧವಾರ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ಕಳೆದ ನಾಲ್ಕೂವರೆ ವರ್ಷದಲ್ಲಿ ಕ್ಷೇತ್ರದ ಪ್ರತಿ ಹಳ್ಳಿಯಲ್ಲಿ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯ ನಿರ್ಮಾಣವಾಗಿದ್ದು, ಗುಣಮಟ್ಟಕ್ಕೂ ಆದ್ಯತೆ ನೀಡಲಾಗಿದೆ. ಕ್ಷೇತ್ರದ ಅಭಿವೃದ್ಧಿ ನೋಡಿ ಜನರು ಪಕ್ಷಾತೀತವಾಗಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಪ್ರಶಂಸಿಸುತ್ತಿದ್ದಾರೆ. ನಿಜವಾಗಿ ಅಭಿವೃದ್ಧಿಯಾಗಬೇಕೆಂದರೆ ಇಂತಹ ಶಾಸಕರಿರಬೇಕು ಎಂದು ಹೇಳುತ್ತಿದ್ದಾರೆ. ನಾವು ನಿಸ್ವಾರ್ಥವಾಗಿ ಮತ್ತು ಅವಿಶ್ರಾಂತವಾಗಿ ಕ್ಷೇತ್ರಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲರ ಸಹಕಾರದಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸಿ ಸಿ ಪಾಟೀಲ, ಸುರೇಶ ಇಟಗಿ, ರುದ್ರಗೌಡ ಪಾಟೀಲ, ಮಲ್ಲಪ್ಪ ಹುಲಿಕವಿ, ಅನಿಲ ಪಾಟೀಲ, ಬಿ ಜಿ ವಾಲಿಇಟಗಿ, ನಿಂಗಪ್ಪ ತಳವಾರ, ಮಹಾಂತೇಶ ಹಂಚಿನಮನಿ, ಮೀರಾ ನದಾಫ್, ಮಲ್ಲನಗೌಡ ಪಾಟೀಲ, ಸಮೀರ ದೇವಲಾಪುರ, ಶಿಪು ಹಳಮನಿ, ಬಿ ಆರ್ ಪಾಟೀಲ, ಅಲ್ತಾಫ್ ಜಾಲಿಕೊಪ್ಪ, ರಾಜಶೇಖರ್ ಬಾಸಿಂಗದಾರ ಮುಂತಾದವರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ