ಬೆಳಗಾವಿ : ಗಣೇಶ ಸಂಭ್ರಮದಲ್ಲಿರುವಾಗಲೇ ಬೆಳಗಾವಿಯ ಚವಾಟಗಲ್ಲಿಯಲ್ಲಿ ಭೀಕರ ಅಗ್ನಿ ಅವಘಡ ರಾತ್ರಿ ಸಂಭವಿಸಿದೆ. ಫ್ರಿಜ್ ದಿಡೀರ್ ಸ್ಪೋಟಗೊಂಡು ; ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಇಡೀ ಮನೆಗೆ ತುಂಬ ಹಬ್ಬಿದೆ.
ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರ ವಿವರ ಇಂತಿದೆ : ಗಜಾನನ ದಮನೆ (64), ರೋಶನ ದಮೋನೆ (21), ಶಾರದಾ ದಮೋನೆ (45) ಹಾಗೂ ಭಾರತಿ ರದಮೋನೆ (50) ಮೃತಪಟ್ಟವರು. ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಗಂಭೀರವಾಗಿ ಗಾಯಗೊಂಡವರು.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಕುಟುಂಬ ಕೂಲಿ ಕೆಲಸ ಮಾಡಿಕೊಂಡು ಸಂಸಾರ ನಿರ್ವಹಿಸುತ್ತಿತ್ತು. ಹಬ್ಬದ ದಿನವೇ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವುದು ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.