Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಓಮೆನ್ ಚಾಂಡಿ ನಿಧನಕ್ಕೆ ಮುಖ್ಯಮಂತ್ರಿ ಶೋಕ

 

ಬೆಂಗಳೂರು :
ಹಿರಿಯ ರಾಜಕೀಯ ಮುತ್ಸದ್ದಿ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಓಮೆನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ‌ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು.

2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯಪಾಲರಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ‌ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು.

1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು.

ಅವರು ಮುಖ್ಯಮಂತ್ರಿ ಆಗಿದ್ದ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಬಾರಿ‌ ಭೇಟಿಯಾಗಿದ್ದೆವು. ಅಭಿವೃದ್ಧಿ ವಿಚಾರದಲ್ಲಿ ಅವರದೇ ಆದ ಸ್ಪಷ್ಟ ತಿಳಿವಳಿಕೆ ಮತ್ತು ಮಾದರಿಗಳನ್ನು ಹೊಂದಿದ್ದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಅಪಾರವಾಗಿ ಶ್ಲಾಘಿಸಿದ್ದರು.‌ ಬಡವರ ಮತ್ತು ಮಧ್ಯಮ ವರ್ಗದವರ ಬದುಕನ್ನು ಉನ್ನತೀಕರಿಸುವ ಸ್ಪಷ್ಟ ಗುರಿ‌ ಮತ್ತು ಮಾರ್ಗ ನಾವು ಜಾರಿ ಮಾಡಿರುವ ಕಾರ್ಯಕ್ರಮಗಳಲ್ಲಿ, ನಾನು ಮಂಡಿಸಿದ ಆಯವ್ಯಯಗಳಲ್ಲಿ ಇದೆ ಎಂದು ಪತ್ರ ಬರೆದು ಮೆಚ್ವುಗೆ ಸೂಚಿಸಿದ್ದರು.

ಇವರ ನಿಧನ ಅಭಿವೃದ್ಧಿ ಮತ್ತು ಜನಪರ ರಾಜಕಾರಣಕ್ಕೆ, ಕೇರಳ ರಾಜ್ಯಕ್ಕೆ, ಭಾರತೀಯ ರಾಜಕಾರಣಕ್ಕೆ ಹಾಗೂ ನನಗೆ ವೈಯುಕ್ತಿಕವಾಗಿ ತುಂಬಲಾರದ ನಷ್ಟ.

ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿರುವ ಓಮನ್ ಚಾಂಡಿಯವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಅಪಾರ ಬಂಧು ಮಿತ್ರರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ