Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

 

ಬೆಂಗಳೂರು :
ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು ಸಾಧ್ಯವಿಲ್ಲ. ಏಕೆಂದರೆ ಅದು ರಾಜ್ಯದ ವಿಷಯ. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣ ನೀತಿಯನ್ನು ಕೇಂದ್ರ ಹೇರಲಾಗದು. ಹೇರಲು ಹೊರಟಿರುವುದು ಒಂದು ಹುನ್ನಾರ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಬಹು ಸಂಸ್ಕೃತಿ, ಬಹುತ್ವ ಇರುವ ದೇಶದಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಮಾಡಲಾಗದು. ಆದ್ದರಿಂದ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬಿಜೆಪಿ ಆಳ್ವಿಕೆಯ ಇತರ ರಾಜ್ಯಗಳೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಹಿಂದೇಟಾಕುತ್ತಿವೆ. ಕೇರಳ, ತಮಿಳು ನಾಡು ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವುದಿಲ್ಲ ಎಂದು ಕೇಂದ್ರಕ್ಕೆ ಸ್ಪಷ್ಟಪಡಿಸಿವೆ ಎಂದು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಕೇಂದ್ರ ಪುರಸ್ಕೃತ ಯೋಜನೆಗಳು ಎಲ್ಲ ರಾಜ್ಯಗಳಿಗೂ ಅನ್ವಯಿಸುವುದರಿಂದ ರಾಜ್ಯಕ್ಕೆ ಅನ್ಯಾಯವಾಗಲಾರದು ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.
ಇದರಿಂದ ಬಡವರು, ಪರಿಶಿಷ್ಟ ಜಾತಿ, ಪಂಗಡದವರು, ಹಿಂದುಳಿದವರು, ಗ್ರಾಮೀಣ ಪ್ರದೇಶದವರಿಗೆ ತೊಂದರೆಯಾಗುತ್ತದೆ. ಉನ್ನತ ಶಿಕ್ಷಣದಲ್ಲಿ ಪ್ರತಿ ವರ್ಷ ಪ್ರಮಾಣ ಪತ್ರ ನೀಡಿದರೂ, ಒಂದು ವರ್ಷ, ಎರಡು ವರ್ಷ ಓದಿದವರಿಗೆ ಎಷ್ಟು ಉದ್ಯೋಗಾವಕಾಶ ದೊರೆಯಲು ಸಾಧ್ಯ? ಉದ್ಯೋಗವಕಾಶ ದೊರೆತು ಹೋದ ಬಡವರ ಮಕ್ಕಳು ಮತ್ತೆ ಓದಲು ಎಷ್ಟು ಅವಕಾಶ ದೊರೆಯುವುದು? ಎಂಬ ಅನುಮಾನ ವ್ಯಕ್ತಪಡಿಸಿದರು.
ಈ ಶಿಕ್ಷಣ ನೀತಿ ಜಾರಿಗೊಳಿಸಲು ಅಗತ್ಯ ಮೂಲಸೌಲಭ್ಯಗಳು ಶಿಕ್ಷಣ ಸಂಸ್ಥೆಗಳಲ್ಲಿ ಇಲ್ಲ. ಇದರಿಂದ ಅನಗತ್ಯ ಗೊಂದಲಗಳು ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ