Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ” ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು.

ಶಾಸಕ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಇಂಧನ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕ ಎಸ್.ಆರ್. ವಿಶ್ವನಾಥ್ , ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಜೈಕಾ ಪ್ರತಿನಿಧಿಗಳು, ಸಚಿವರುಗಳು,ಶಾಸಕರುಗಳು, ಚುನಾಯಿತ ಪ್ರತಿನಿಧಿಗಳು,ಅಧಿಕಾರಿಗಳು ಸೇರಿದಂತೆ ಅನೇಕರು ಇದ್ದರು.

ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ.

ಲೋಕಾರ್ಪಣೆಗೊಳಿಸಿದ ನೆನಪಿಗಾಗಿ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳ ಜೊತಗೂಡಿ ಘಟಕದ ಆವರಣದಲ್ಲಿ ಸಸಿ ನೆಟ್ಟರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ