Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಗೃಹ ಸಚಿವ ಅಮಿತ್ ಶಾ ಅವರಿಗೆ ಬಹಿರಂಗ ಸವಾಲು ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ

 

ಬೆಂಗಳೂರು :
ಗೃಹ ಸಚಿವ ಅಮಿತ್ ಶಾ ಅವರಿಗೆ ಬಹಿರಂಗ ಸವಾಲು ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆಗೆ ಸಿದ್ದ ಎಂದು ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು, ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕು. ಈ ಮೂಲಕ ತಮ್ಮ ದಮ್ಮು ತಾಕತ್ ತೋರಿಸಬೇಕು. ಆಗಾಗ ಗೊಣಗಾಡಿಕೊಂಡರೆ ಏನು ಫಲ?

ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರು ‘’ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ’’ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಹಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ, ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದನ್ನು ನಾನು ಸಾಬೀತು ಮಾಡಬಲ್ಲೆ. ಇದು ಅಮಿತ್ ಶಹಾ ಅವರಿಗೆ ನನ್ನ ಸವಾಲು ಕೂಡಾ ಹೌದು.

ಕರ್ನಾಟಕದ ಬಗ್ಗೆ ಮಾತನಾಡುವಾಗ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಬಿಜೆಪಿ ನಾಯಕರು ತಮ್ಮ ಆಳ್ವಿಕೆಯ ರಾಜ್ಯಗಳಲ್ಲಿ ಅದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಗ್ಯಾರಂಟಿಯ ಯೋಜನೆಗಳನ್ನು ಮಾತ್ರ ಅಲ್ಲ, ಗ್ಯಾರಂಟಿ ಎಂಬ ಹೆಸರನ್ನೂ ಕದ್ದು ಈಗ ಅದೇ ಹೆಸರಲ್ಲಿ ಜಾಹೀರಾತು ನೀಡಿದ್ದಾರೆ. ಇದು ಆ ಪಕ್ಷದ ಬಡಜನ ವಿರೋಧಿ ನಿಲುವು ಮತ್ತು ಬೌದ್ದಿಕ ದಿವಾಳಿತನವನ್ನು ತೋರಿಸುತ್ತದೆ.

ಪ್ರಧಾನಿ ನರೇಂದ್ರಮೋದಿ, ಅಮಿತ್ ಶಹಾ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರು ನಿಜವಾಗಿ ವಿರೋಧಿಸುವುದು ಗ್ಯಾರಂಟಿ ಯೋಜನೆಗಳನ್ನಲ್ಲ, ಅವರ ಕೆಂಗಣ್ಣು ಬಿದ್ದಿರುವುದು ಈ ಯೋಜನೆಗಳ ಫಲಾನುಭವಿಗಳಾಧ ಬಡವರ ಮೇಲೆ. ಬಡಜನರಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅವುಗಳನ್ನು ವಿರೋಧಿಸುತ್ತಲೇ ಬಂದಿರುವ ಇತಿಹಾಸ ಬಿಜೆಪಿ ಮತ್ತು ಸಂಘ ಪರಿವಾರಕ್ಕಿದೆ. ದಿವಂಗತ ಪ್ರಧಾನಿ ಇಂದಿರಾಗಾಂಧಿಯವರು ಗರೀಬಿ ಹಟಾವೋ ಎಂದು ಕರೆನೀಡಿದಾಗಲೂ ಇದೇ ಪರಿವಾರದವರು ಅದನ್ನು ವಿರೋಧಿಸಿದ್ದರು. ಭೂ ಸುಧಾರಣೆ, ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯದ ಯಾವುದೇ ಕಾರ್ಯಕ್ರಮಗಳಿದ್ದರೂ ಇವರ ವಿರೋಧ ಇದ್ದೇ ಇದೆ. ಇದಕ್ಕೆ ಬಡವರೇ ತಕ್ಕ ಉತ್ತರವನ್ನು ಕೊಡಬೇಕು.

ಮುಖ್ಯಮಂತ್ರಿ ಸ್ಥಾನದ ಮೊದಲ ಅವಧಿಯಲ್ಲಿ ನಾನು ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಬಡವರ ಕಲ್ಯಾಣದ ಕಾರ್ಯಕ್ರಮಗಳ ಬಗ್ಗೆಯೂ ಬಿಜೆಪಿ ನಾಯಕರು ಇದೇ ರೀತಿ ತಮ್ಮ ಅಸಹನೆ ಮತ್ತು ಮತ್ಸರವನ್ನು ಕಾರಿಕೊಂಡಿದ್ದರು. ಬಡವರಿಗೆ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಕೊಡಲು ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಭಾರತ್ ಬ್ರಾಂಡಿನಲ್ಲಿ ಅದೇ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದಾರೆ. ನಾವು ಕಿಲೋಗೆ ರೂ.33ರಂತೆ ಅಕ್ಕಿ ಕೇಳಿದಾಗ ನಿರಾಕರಿಸಿದ್ದ ಕೇಂದ್ರ ಸರ್ಕಾರ ಈಗ ಕಿಲೋಗೆ ರೂ.29ರಂತೆ ಮಾರಾಟ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಬಿಜೆಪಿಗೆ ಕರ್ನಾಟಕದ ಬಡವರು, ರೈತರು, ಮಹಿಳೆಯರು, ಕಾರ್ಮಿಕರೆಂದರೆ ಅಸಹನೆ.
ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ದ ಮಾತನಾಡುತ್ತಿರುವ ಗೃಹ ಸಚಿವ ಅಮಿತ್ ಶಹಾ ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ ಮೇಲೆ ಅಮುಲ್ ಹೇರುವ ಹುನ್ನಾರ ಇವೆಲ್ಲವೂ ಅಮಿತ್ ಶಹಾ ಸಾಧನೆಗಳು. ಕೇಂದ್ರ ಸರ್ಕಾರ ಬರಪರಿಹಾರ ನೀಡಬೇಕೆಂದರೆ ಗೃಹ ಸಚಿವ ಅಮಿತ್ ಶಹಾ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತೀರ್ಮಾನಿಸಬೇಕು. ಕನ್ನಡಿಗರ ವಿರೋಧಿಯಾಗಿರುವ ಅಮಿತ್ ಶಹಾ ಅವರು ಆ ಸಭೆಯನ್ನೇ ಕರೆಯುತ್ತಿಲ್ಲ. ಇಂತಹವರು ರಾಜ್ಯಕ್ಕೆ ಬಂದು ನಮಗೆ ಪಾಠ ಮಾಡುತ್ತಿದ್ದಾರೆ.

ಬಡವರ ಕಷ್ಟ ಕಡಿಮೆ ಮಾಡುವ ಕಣ್ಣೀರು ಒರೆಸುವ ಕೆಲಸವೇ ನಿಜವಾದ ದೈವ ಭಕ್ತಿ ಎಂದು ನಾನು ತಿಳಿದುಕೊಂಡವನು. ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿ ಎಷ್ಟು ಬಾರಿ ರಾಮನಾಮ ಹೇಳಿದರೂ ಅದು ವ್ಯರ್ಥ. ಬಡವರಗೆ ಅನ್ನವನ್ನೂ ನೀಡದೆ ದೇವರಿಗೆ ನೈವೇದ್ಯ ನೀಡಿ ಏನು ಫಲ? ಬಡವರಿಗೆ ಮನೆ ಕಟ್ಟಿಕೊಡದೆ ದೇವರಿಗೆ ಗುಡಿ ಕೊಟ್ಟು ಏನು ಫಲ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವವರಿಗೆ ಯಾವ ರಾಮನ ದಯೆಯೂ ಇರಲಾರದು. ತಾಯಿ ಚಾಮುಂಡೇಶ್ವರಿಯ ಆಶೀರ್ವಾದವೂ ಇರಲಾರದು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ