Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ- ಮುಖ್ಯಮಂತ್ರಿ ಸಿದ್ದರಾಮಯ್ಯ

 

ಬೆಳಗಾವಿ :
ನಮ್ಮ ಸರ್ಕಾರ ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಪ್ರಕರಣಗಳನ್ನು ನಿಯಂತ್ರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಕೋಮು ಗಲಭೆ ಹೆಚ್ಚಾಗಿದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರಿಗೆ ಆರೋಪ ಮಾಡುವುದೇ ಕೆಲಸವಾಗಿದೆ. ಆರೋಪ ಮಾಡುವುದೆಲ್ಲ ಸತ್ಯವಲ್ಲ.ಶಿವಮೊಗ್ಗದ ಪ್ರಕರಣದಲ್ಲಿ ಕಲ್ಲು ಹೊಡೆದ ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

*ಪ್ರತಿಭಟನೆಗೆ ಸಕಾರಣವಿರಬೇಕು*
ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಉತ್ತರಿಸಿ, ಯಾರು ಬೇಕಾದರೂ ಪ್ರತಿಭಟನೆ ಮಾಡಬಹುದು. ಆದರೆ ಆ ಪ್ರತಿಭಟನೆಗೆ ಸಕಾರಣವಿರಬೇಕು ಮತ್ತು ಶಾಂತಿಯುತವಾಗಿ ನಡೆಯಬೇಕು ಎಂದರು.

*ಸರ್ಕಾರದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ.*
ಕುರುಬ ಸಮಾಜ ಸಮಾವೇಶದ ಸಂದರ್ಭದಲ್ಲಿ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂಬ ಕೂಗು ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಮ್ಮ ಸರ್ಕಾರದಲ್ಲಿ ಯಾರಿಗೂ ಅನ್ಯಾಯವಾಗಿಲ್ಲ. ಎಲ್ಲರನ್ನೂ ಒಳಗೊಂಡಂತಹ ಆಡಳಿತದ ನೀತಿ ನಮ್ಮ ಸರ್ಕಾರ ಹೊಂದಿದೆ ಎಂದರು.

ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಉಪ ಮುಖ್ಯಮಂತ್ರಿಗಳು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ, ಒಕ್ಕಲಿಗರ ಹೋರಾಟ ಸಮಿತಿ ನೀಡಿದ ಪತ್ರವನ್ನು ಆಧರಿಸಿ, ಉಪ ಮುಖ್ಯಮಂತ್ರಿಗಳು ನನಗೆ ಪತ್ರ ಬರೆದಿದ್ದಾರೆ. ಇಂದಷ್ಟೇ ಆ ಪತ್ರ ನೋಡಿದ್ದೇನೆ ಎಂದು ತಿಳಿಸಿದರು.

ತಮ್ಮ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯ ವಿಭಜನೆ ಆಗಲಿದೆಯೇ ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಶಾಸಕರ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ