Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಿ.31ರೊಳಗೆ ಚಿಕ್ಕೋಡಿ ಜಿಲ್ಲೆ ಘೋಷಣೆ: ಸಚಿವೆ ಹೆಬ್ಬಾಳಕರ ಭರವಸೆ

ಚಿಕ್ಕೋಡಿ: ಡಿ.31ರೊಳಗೆ ಅಖಂಡ ಬೆಳಗಾವಿ ಜಿಲ್ಲೆ

ವಿಭಜಿಸಿ ಚಿಕ್ಕೋಡಿ ಜಿಲ್ಲೆಯನ್ನು ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಚಿಕ್ಕೋಡಿ ಜಿಲ್ಲಾ ವ್ಯಾಪ್ತಿಯ ಜನರು ನಿರಾಶೆಗೊಳಗಾಗುವ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಪದಾಧಿಕಾರಿಗಳಿಗೆ ಭರವಸೆ ನೀಡಿದರು.

ಬೆಳಗಾವಿ ನಗರದಲ್ಲಿ ಬುಧವಾರ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ನೀಡಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, 'ಅಖಂಡ ಬೆಳಗಾವಿ ಜಿಲ್ಲೆಯ ಜನರಿಗೆ ಸರ್ಕಾರದ ಯೋಜನೆ ಹಾಗೂ ಅನುದಾನವನ್ನು ಸಮರ್ಪಕವಾಗಿ ತಲುಪಿಸಲು ಜಿಲ್ಲೆಯ ವಿಭಜನೆ ಮಾಡುವುದು ಅಗತ್ಯವಾಗಿದೆ ಎಂದು ಸರ್ಕಾರಕ್ಕೆ ಮನವರಿಕೆಯಾಗಿದೆ. ಜಿಲ್ಲೆಯ ವಿಭಜನೆಗೆ ವೈಯಕ್ತಿಕವಾಗಿ ತನ್ನ ಸಹಮತ ಇರುವುದಾಗಿ ಹೇಳಿದರು.

ಚಿಕ್ಕೋಡಿ ಜಿಲ್ಲೆಯನ್ನು ರಚಿಸುವಂತೆ ಇದೇ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಾಜಿ ವಿಧಾನ ಪರಿಷತ್‌ ಸದಸ್ಯ ಮಹಾಂತೇಶ ಕವಟಗಿಮಠ ಅವರಿಗೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯಿಂದ ಪ್ರತ್ಯೇಕವಾಗಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಎಸ್‌ ವೈ ಹಂಜಿ, ಕಾರ್ಯದರ್ಶಿ ರುದ್ರಪ್ಪ ಸಂಗಪ್ಪಗೋಳ, ಸಂಜಯ ಪಾಟೀಲ, ಸಂತೋಷ ಚಿಂಗಳೆ, ವಿಠಲ ಸ್ವಾಮಿ, ಬಸು ಸಾಬನೆ, ಸುರೇಶ ಬ್ಯಾಕುಡೆ, ಕಾಶಿನಾಥ ಗಿರಿಜಾವಗೋಳ, ಸುರೇಶ ತಳವಾರ, ಅರವಿಂದ ಮಾದರ, ಜಗದೀಶ ಪಾಟೀಲ ಇತರರು ಇದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ