Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕನ್ನಡ ಸ್ವಾಮೀಜಿ ಎಂದೇ ಖ್ಯಾತರಾಗಿದ್ದ ಚಿಂಚಣಿ ಸ್ವಾಮೀಜಿ ಲಿಂಗೈಕ್ಯ

 

 

ಬೆಳಗಾವಿ :
ಚಿಕ್ಕೋಡಿಯ ಚಿಂಚಣಿ ಮಠದ ಸ್ವಾಮೀಜಿ ನಿಧನರಾಗಿದ್ದಾರೆ. ರವಿವಾರ ನಿಧನರಾಗಿದ್ದು ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಚಿಕ್ಕೋಡಿ ನಗರದಿಂದ 6 ಕಿ.ಮೀ ದೂರದಲ್ಲಿ ಇರುವ ಚಿಂಚಣಿ ಎಂಬ ಪುಟ್ಟ ಗ್ರಾಮದಲ್ಲಿನ ಅಲ್ಲಮಪ್ರಭು ಸಿದ್ದಸಂಸ್ಥಾನ ಮಠವು ಕನ್ನಡದ ಕಾಯಕದ ಮೂಲಕ ಇಡೀ ನಾಡಿನಾದ್ಯಂತ ಚಿರಪರಿಚಿತವಾಗಿದೆ. ಇದರ ಪೀಠಾಧಿಪತಿಗಳಾದ ಅಲ್ಲಮಪ್ರಭು ಸ್ವಾಮೀಜಿ ಅವರು ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿ ಹೊಂದಿದ್ದಾರೆ. ಕನ್ನಡ ನುಡಿ, ಗಡಿ, ಸಂಸ್ಕೃತಿ ಸಂರಕ್ಷಣೆ ಮತ್ತು ಸಂವರ್ಧನೆಯ ದೀಕ್ಷೆ ತೊಟ್ಟು ಕನ್ನಡದ ಅಸ್ಮಿತೆಯನ್ನು ಗಟ್ಟಿಗೊಳಿಸುವ ಕೈಂಕರ್ಯದಲ್ಲಿ ಅವರು ಕ್ರಿಯಾಶೀಲರಾಗಿದ್ದಾರೆ. ಪ್ರತಿ ವರ್ಷ ಕನ್ನಡ ರಾಜ್ಯೋತ್ಸವನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಕನ್ನಡ ಜಾಗೃತಿಯುಂಟು ಮಾಡುತ್ತಿದ್ದಾರೆ. ಕನ್ನಡ ನಿತ್ಯೋತ್ಸವ ಆಗಬೇಕು ಎಂಬ ಕನಸನ್ನು ನನಸು ಮಾಡಿದ ಮಠವಿದು.

ಶ್ರೀಮಠದಿಂದ 45ಕ್ಕೂ ಹೆಚ್ಚು ಗ್ರಂಥಗಳ ಪ್ರಕಟಣೆ: ಅಲ್ಲಮಪ್ರಭು ಜನಕಲ್ಯಾಣ ಸಂಸ್ಥೆಯ ಕನ್ನಡ ಜಾಗೃತಿ ಪುಸ್ತಕ ಮಾಲೆಯ ಮೂಲಕ ಇದುವರೆಗೆ ಆಧುನಿಕ ಕರ್ನಾಟಕದ ಆತಂಕಗಳು, ಕನ್ನಡತನ ಮತು ಭಾರತೀಯತೆ, ಮಹಾಜನ ವರದಿ ಒಂದು ಅವಲೋಕನ, ಕನ್ನಡದ ಕೋಟೆ ಕೆಎಲ್‌ಇ ಸಂಪ್ರದಾಯದ ಇತಿಹಾಸ, ರಂಗಭೂಮಿ-ಕನ್ನಡದ ಸಂವೇಧನೆ, ನಮ್ಮ ನಾಡು, ನುಡಿ ಮತ್ತು ಗಡಿ ಕನ್ನಡದ ಕಟ್ಟೋಣ, ಕರ್ನಾಟಕ ಏಕೀಕರಣ ಚಳವಳಿ, ಕನ್ನಡ-ಕನ್ನಡಿಗ, ಕರ್ನಾಟಕ ಏಕೀಕರಣ ಚಳವಳಿ ಮತ್ತು ಮಹಿಳೆ, ಮಹಾದಾಯಿ ನೀರಿಗಾಗಿ ಹೋರಾಟ ಮತ್ತು ಕನ್ನಡಕ್ಕೆ ಕೈ ಎತ್ತು…ಮೊದಲಾದ 45 ಕ್ಕೂ ಹೆಚ್ಚು ಮೌಲಿಕ ಗ್ರಂಥಗಳನ್ನು ಪ್ರಕಟಿಸಲಾಗಿದೆ. ಮರಾಠಿಯ ಹಲವು ಕೃತಿಗಳನ್ನು ಕನ್ನಡಕ್ಕೆ ಅನುವಾದಿಸುವ ಮೂಲಕ ಕನ್ನಡ-ಮರಾಠಿ ಸಾಹಿತ್ಯ ಮತ್ತು ಸಂಸ್ಕೃತಿಕ ಬಾಂಧವ್ಯವನ್ನು ಹೆಚ್ಚಿಸಿದ್ದಾರೆ.

ಸ್ವಾಮೀಜಿಗಳು ಕನ್ನಡ ಪರವಾದ ಪುರಾತನ ದಾಖಲೆಗಳನ್ನು ಸಂಗ್ರಹಿಸುವಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಕನ್ನಡದ ಇತಿಹಾಸ ತಿಳಿಸುವ ಅಪರೂಪದ ದಾಖಲೆಗಳು ಅವರ ಬಳಿ ಇವೆ. ದೇಶ-ವಿದೇಶ ಕರೆನ್ಸಿಗಳ ಸಂಗ್ರಹವೂ ಇವೆ. ಬೋನ್ಸಾಯ್‌ ಸಸ್ಯ ಬೆಳೆಸುವ ಹವ್ಯಾಸ ಹೊಂದಿದ್ದಾರೆ.

ಕನ್ನಡದ ತೇರು: ಜಾತ್ರೆ-ಉತ್ಸವಗಳಲ್ಲಿ ರಥೋತ್ಸವ ನಡೆಸುವುದು ಸಾಮಾನ್ಯ. ಆದರೆ ಈ ಮಠದಲ್ಲಿ ಸ್ವಾಮೀಜಿ ಅವರು ಕನ್ನಡ ತೇರು ನಿರ್ಮಿಸಿ ಕಳೆದೊಂದು ದಶಕದಿಂದ ಸಿರಿಗನ್ನಡದ ತೇರು ಎಳೆಯುತ್ತಿದ್ದಾರೆ. ಅಪ್ಪಟ ಕನ್ನಡದ ರಥವಾಗಿರುವ ಇದರಲ್ಲಿ 32 ಸಾಹಿತಿಗಳ ಚಿತ್ರಗಳು ಮತ್ತು 16 ಕನ್ನಡದ ಘೋಷಣೆಗಳನ್ನು ಕೆತ್ತಲಾಗಿದೆ. ತೇರಿನ ಎಂಟು ಭಾಗಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಹಾಕಲಾಗಿದೆ. ಇದರ ನಡುವೆ ತಾಯಿ ಭವನೇಶ್ವರಿ ಮೂರ್ತಿಯನ್ನು ಇರಿಸಿ ಪ್ರತಿ ವರ್ಷ ಯುಗಾದಿ ಹಬ್ಬದಂದು ತೇರನ್ನು ಎಳೆಯಲಾಗುತ್ತದೆ.

ಕಳೆದ 20 ವರ್ಷದಿಂದ ಪ್ರತಿ ವರ್ಷ ಮಠದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಾ ಬರಲಾಗಿದೆ. ನಾಡಿನ ಖ್ಯಾತ ಸಾಹಿತಿಗಳು ಮತ್ತು ಕನ್ನಡದ ವಿದ್ವಾಂಸರನ್ನು ಕರೆಯಿಸಿ ಶ್ರೀಮಠವು ಮಾಡುವ ಕನ್ನಡದ ಕಾಯಕವನ್ನು ಪರಿಚಯ ಮಾಡಲಾಗುತ್ತದೆ. ಗಡಿ ಭಾಗದಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ ಜಾಗೃತಿ ಉಂಟು ಮಾಡಲು ಅಲ್ಲಮಪ್ರಭು ಸಿದ್ದಸಂಸ್ಥಾನ ಮಠ ಕೆಲಸ ಮಾಡುತ್ತಿದೆ.

ಗಡಿ ಭಾಗದಲ್ಲಿ ‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತಿಯಾಗಿದ್ದ ಚಿಂಚಣಿಯ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (63) ಅವರು ಭಾನುವಾರ (ನವೆಂಬರ್‌ 12) ಲಿಂಗೈಕ್ಯರಾಗಿದ್ದಾರೆ. ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ.

ಗಡಿ ಭಾಗದಲ್ಲಿ ಚಿಂಚಣಿ ಶ್ರೀಗಳು ಕನ್ನಡದ ಸ್ವಾಮೀಜಿ ಎಂದೇ ಖ್ಯಾತರಾಗಿದ್ದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿಯಾಗಿದ್ದ ಇವರು ಅಪಾರ ಭಕ್ತರನ್ನು, ಅನುಯಾಯಿಗಳನ್ನು ಹೊಂದಿದ್ದರು. ಕೆಲ ದಿನಗಳಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ವಾಮೀಜಿ ಅಗಲಿಕೆಯಿಂದಾಗಿ ಸಾವಿರಾರು ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಭಾನುವಾರವೇ ಸ್ವಾಮೀಜಿಯವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಮಠದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ನೂರಾರು ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ. ಇನ್ನೂ ನೂರಾರು ಭಕ್ತರು ಮಠದತ್ತ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ