ಬೆಳಗಾವಿ :
ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ ಒಡೆತನಕ್ಕೆ ಸೇರಿರುವ ಚಿಕ್ಕನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮಿ ಸಕ್ಕರೆ ಕಾರ್ಖಾನೆ ಮೇಲೆ ಮಂಗಳವಾರದಂದು ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ್ದ ಸಿಐಡಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದೆ. ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಅಪೆಕ್ಸ್ ಬ್ಯಾಂಕಿನಿಂದ 439 ಕೋಟಿ ರೂಪಾಯಿ ಸಾಲ ಪಡೆದಿದ್ದು ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಅಪೆಕ್ಸ್ ಬ್ಯಾಂಕ್ ಈಗಾಗಲೇ ದೂರು ದಾಖಲು ಮಾಡಿದೆ. ರಾಜ್ಯ ಸರಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.