Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ : ಸಿ.ಎಂ ಘೋಷಣೆ

ಬೆಂಗಳೂರು: ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ ಅಭಿನಯ ಶಾರದೆ ಜಯಂತಿ ಅವರ ಜೀವನಗಾಥೆ "Lovely But lonely" ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಜಯಂತಿ ಅವರು ನನ್ನನ್ನು ಸದಾ ಪ್ರೀತಿಯಿಂದ ಹೀರೋ ಅಂತ ಕರಿಯುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು.

ಜಯಂತಿ ಅವರು ಅಪಾರ ಮನುಷ್ಯತ್ವ ಹೊಂದಿದ್ದ ಸ್ನೇಹಜೀವಿ ಆಗಿದ್ದರು. ಕಲಾವಿದೆಯಾಗಿ ಜಯಂತಿಗೆ ಜಯಂತಿಯವರೇ ಸಾಟಿ ಆಗಿದ್ದರು. ಅವರು ಮಾನವೀಯವಾಗಿ ಬದುಕನ್ನು ನಡೆಸಿ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ ಎಂದರು.

ನನ್ನ ಮತ್ತು ಜಯಂತಿ ಅವರ ರಾಜಕೀಯ ಮೌಲ್ಯಗಳು ಒಂದೇ ಆಗಿದ್ದರು. ಸಮಾಜ ಪ್ರೇಮಿ, ಮಾನವೀಯತೆಯ ಪ್ರೇಮಿ ಆಗಿದ್ದರು ಎಂದು ಬಣ್ಣಿಸಿದರು.

ವಿಶ್ವದ ಯಾವುದೇ ಭಾಷೆಯ ಸಿನಿಮಾಗಳಿಗಿಂತ ಕನ್ನಡ ಭಾಷೆ ಸಿನಿಮಾಗಳು ಹಿಂದೆಲ್ಲಾ ಒಳ್ಳೆ ಗುಣಮಟ್ಟ ಕಾಯ್ದುಕೊಂಡಿವೆ. ನಾನು ಸದಾ ನಮ್ಮ ಕನ್ನಡ ಚಿತ್ರರಂಗದ ಪ್ರೋತ್ಸಾಹಕ್ಕೆ ನಿಲ್ಲುತ್ತೇನೆ. ಕನ್ನಡ ಸಿನಿಮಾಗಳಿಗೆ 100% ತೆರಿಗೆ ವಿನಾಯ್ತಿ ಘೋಷಿಸಿದ್ದು ನಾನೇ ಎಂದರು.

ಪಿ.ಲಂಕೇಶ್ ಅವರು ನನಗೆ ಗುರುಗಳ ರೀತಿ. ಪತ್ರಿಕೆ ಕಚೇರಿಗೆ ಹೋಗಿ ಮಾರ್ಗದರ್ಶನ ಪಡೆಯುತ್ತಿದ್ದೆ ಎಂದು ಸ್ಮರಿಸಿದರು.

ನಟ ರಮೇಶ್ ಅರವಿಂದ್, ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್, ನಿರ್ದೇಶಕಿ ಕವಿತಾ ಲಂಕೇಶ್ , ಹಿರಿಯ ಪತ್ರಕರ್ತ ಸಮೀವುಲ್ಲಾ , ಜಯಂತಿ ಅವರ ಪುತ್ರ ಕೃಷ್ಣಕುಮಾರ್ ಮತ್ತು ಕೃತಿಯ ಲೇಖಕ ಸದಾಶಿವ ಶೆಣೈ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ