Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಎಂದ ಸಿಎಂ ಆರ್ಥಿಕ ಸಲಹೆಗಾರ

ಕೊಪ್ಪಳ: ಯಾವುದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತದೆ. ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್ ಒನ್ ಆಗಿದೆ' ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರೂ ಆಗಿರುವ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯು ಮಂಗಳವಾರ ಇಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಂವಾದ ಸಭೆಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ವ್ಯಾಪಕವಾಗಿರುವುದರಿಂದಲೇ ಗುಣಮಟ್ಟದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಹಿಂದೆಲ್ಲ ಐದಾರು ದಶಕ ಬಾಳಿಕೆ ಬರುತ್ತಿದ್ದ ಸರ್ಕಾರಿ ಕಟ್ಟಡಗಳು ಹತ್ತು ವರ್ಷಗಳಲ್ಲಿಯೇ ಬಿದ್ದು ಹೋಗುತ್ತಿವೆ. ಅದರಲ್ಲೂ ಕಲ್ಯಾಣ ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚು ತಾಂಡವಾಗುತ್ತಿದೆ ಎಂದರು.

ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವಾಗ ಪ್ರಾದೇಶಿಕ ಅಸಮತೋಲನ ನಿವಾರಣೆ ಹೇಗೆ ಸಾಧ್ಯವಾಗುತ್ತದೆ. ಜನಪ್ರತಿನಿಧಿಗಳು ಹೇಗೆ ಇರುತ್ತಾರೊ ಅದರಂತೆ ಅಧಿಕಾರಿಗಳೂ ಇರುತ್ತಾರೆ. ಮುಖ್ಯಮಂತ್ರಿ ಏನೇ ಹೇಳಿದರೂ ಭ್ರಷ್ಟಾಚಾರ ಕುರಿತು ನನ್ನ ಅಭಿಪ್ರಾಯ ಇದೇ ಇರುತ್ತದೆ ಎಂದರು.

22 ವರ್ಷಗಳಷ್ಟು ಹಳೆಯದಾದ ಡಿ.ಎಂ.ನಂಜುಂಡಪ್ಪ ವರದಿ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ರಚಿಸಿದೆ. ಭ್ರಷ್ಟಾಚಾರದ ಕುರಿತು ಹೇಳಿಕೆಯನ್ನು ನನ್ನ ಹೆಸರನ್ನು ಉಲ್ಲೇಖಿಸಿಯೇ ಶಿಫಾರಸಿನಲ್ಲಿ ಸೇರಿಸಿ' ಎಂದು ಸಮಿತಿಯ ಸದಸ್ಯ ಕಾರ್ಯದರ್ಶಿ ವಿಶಾಲ್‌ ಆ‌ರ್. ಅವರಿಗೆ ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ