Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೂರಕ್ಕೆ ಮೂರು ಕ್ಷೇತ್ರ ಗೆಲ್ಲಲು ಸಿಎಂ ವ್ಯೂಹ ರಚನೆ

ಬೆಂಗಳೂರು : ವಿಧಾನಸಭೆಯ ಮೂರು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ, ಜಾತಿ ಗಣತಿ, ಮೀಸಲಾತಿ ಮತ್ತಿತರ ವಿಚಾರಗಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಚಿವರ ಜೊತೆ ಸಭೆ ನಡೆಸಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವರ ಸಭೆಯಲ್ಲಿ ಚರ್ಚೆಯಾದ ಸಂಗತಿಗಳು/ ತೆಗೆದುಕೊಂಡ ತೀರ್ಮಾನಗಳು.

*ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಸಂಪೂರ್ಣ ಶ್ರಮ‌ ಹಾಕಿ ಚುನಾವಣೆ ನಿರ್ವಹಿಸಬೇಕು.

*ಪ್ರತೀ ಚುನಾವಣೆ ಸಂದರ್ಭದಲ್ಲೂ ಬಿಜೆಪಿಯ ಪ್ರತಿಯೊಬ್ಬರೂ ಚಾಲೆಂಜಿಗೆ ಬಿದ್ದವರಂತೆ ಸುಳ್ಳುಗಳನ್ನು ಹೇಳುತ್ತಾರೆ. ಅವರ ಸುಳ್ಳುಗಳನ್ನು ಜನರೆದುರು ಬಯಲುಗೊಳಿಸಬೇಕು.

*ಲೋಕಸಭೆ ಚುನಾವಣೆ ಮುಗಿದ ಮರುದಿನವೇ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಮೋದಿಯವರಿಂದ ಹಿಡಿದು ಸಿ.ಟಿ.ರವಿವರೆಗೂ ಪ್ರತಿಯೊಬ್ಬರೂ ರಾಶಿ ರಾಶಿ ಸುಳ್ಳು ಹೇಳಿದ್ದರು. ಈ ಚುನವಣೆಯಲ್ಲೂ ಹೊಸ ಹೊಸ ಸುಳ್ಳುಗಳನ್ನು ಬೆಳಗ್ಗೆ, ಮಧ್ಯಾಹ್ನ, ಸಂಜೆ, ರಾತ್ರಿ ಹೇಳುತ್ತಲೇ ಇರುತ್ತಾರೆ. ಇವುಗಳನ್ನು ಸರಿಯಾಗಿ ಕೌಂಟರ್ ಮಾಡಬೇಕು.

*ಉಪಚುನಾವಣೆ ಮುಗಿಯುವರೆಗೂ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಮಾಣ ಇನ್ನೂ ಹೆಚ್ಚಲಿದೆ.

*ಜಾತಿ ಸಮೀಕ್ಷೆ, ಒಳ ಮೀಸಲಾತಿ, ಪಂಚಮಸಾಲಿ ಸಮುದಾಯದ ಬೇಡಿಕೆ ಕುರಿತಂತೆ ಅಪಪ್ರಚಾರ ಮಾಡುತ್ತಾರೆ. ಈ ಎಲ್ಲಾ ವಿಚಾರಗಳ ಬಗ್ಗೆಯೂ ನಮ್ಮ ನಿಲುವು ಸ್ಪಷ್ಟವಾಗಿದ್ದು ಆಯಾ ಸಮುದಾಯದ ಮುಖಂಡರು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ನಮ್ಮ ಬೆಂಬಲ ಇರುವುದನ್ನು ಮನದಟ್ಟು ಮಾಡಿಸಿದ್ದೇವೆ. ಆದರೂ ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಭಯಾನಕ ಅಪಪ್ರಚಾರ ಮಾಡುತ್ತದೆ. ಸುಳ್ಳುಗಳ ಹೊರತಾಗಿ ಬಿಜೆಪಿಗೆ ಬೇರೆ ಬಂಡವಾಳ ಇಲ್ಲ.

*ಮೂರೂ ಕ್ಷೇತ್ರಗಳ ಉಪಚುನಾವಣೆ ಬಹಳ ಮಹತ್ವದ್ದಾಗಿದ್ದು ನಾವು ಮೂರನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ತಾವು ವಹಿಸಿಕೊಂಡ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ