Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಬಿಗ್ ಶಾಕ್ ನೀಡಿದ ಸಿಎಂ

ಮೈಸೂರು : ಸುಳ್ಳಿನ ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌

ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು.

ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ.

ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿರ್ಬಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು ಎಂದು ವಿವರಿಸಿದರು.

ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳಯ, "ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. " ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ" ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ‌ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

*ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕ ರವೀಂದ್ರ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಪುಷ್ಪಾ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಉಪಸ್ಥಿತರಿದ್ದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ದೀಪಕ್, ಕಾರ್ಯದರ್ಶಿ ರವಿ ಪಾಂಡವಪುರ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ