Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಲಬುರ್ಗಿಯಲ್ಲಿ 'ವಚನ ಮಂಟಪ' ಸ್ಥಾಪನೆ : ಸಿಎಂ ಸಿದ್ಧರಾಮಯ್ಯ ಘೋಷಣೆ

 

ಬೆಂಗಳೂರು:
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಲಬುರ್ಗಿಯಲ್ಲಿ ವಚನ ಮಂಟಪ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಸ್ಪಂದಿಸಿದ್ದಾರೆ.
ಈ ಕುರಿತಂತೆ ನಿನ್ನೆಯಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬೆಂಗಳೂರು ಅಥವಾ ಕಲಬುರಗಿಯಲ್ಲಿ 'ವಚನ ಮಂಟಪ' ಹಾಗೂ 'ವಚನ ವಿಶ್ವವಿದ್ಯಾಲಯ' ಸ್ಥಾಪಿಸುವಂತೆ ಮತ್ತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರದ ಮೂಲಕ ಮನವಿ ಮಾಡಿದ್ದರು.
ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕನ್ನಡ ನಾಡು ಇಂದು ಇಡೀ ವಿಶ್ವದಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನಗಳಿಸಿ, ಭಾರತ ದೇಶದ ಆರ್ಥಿಕ ಯಂತ್ರವಾಗಿ ಕಾರ್ಯ ನಿರ್ವಹಿಸುತ್ತಾ ಒಂದು ಅಮೋಘ ರಾಜ್ಯವಾಗಿ ರೂಪುಗೊಳ್ಳಲು ನಮ್ಮ ನಾಡಿನ ತಾತ್ವಿಕ ಅಡಿಪಾಯವೇ ಕಾರಣ. ಈ ತತ್ವಗಳ ಆಶಯವನ್ನು ಜಗತ್ತಿಗೆ ತಿಳಿಸಲು ಇರುವ ಭಾಷೆಯ ಅಂತರಕ್ಕೆ ಸೇತುವೆ ಕಟ್ಟುವ ಮಹತ್ತರವಾದ ಕೆಲಸ ಮಾಡುವ ನಿಟ್ಟಿನಲ್ಲಿ ಈ ಕೆಳಗಿನ ಎರಡು ಮನವಿಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದರು.
1) ವಚನ ಮಂಟಪ: ನಾಡಿನ ರಾಜಧಾನಿಯಾದ ಬೆಂಗಳೂರಿನಲ್ಲಿ ಅಥವಾ ಶರಣ ಸಾಹಿತ್ಯದ ಕೇಂದ್ರ ಬಿಂದುವಾಗಿದ್ದ ಕಲಬುರಗಿಯಲ್ಲಿ ಜಗಜ್ಯೋತಿ ಗುರು ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಮಡಿವಾಳ ಮಾಚಿದೇವ, ದೇವರ ದಾಸಿಮ್ಮಯ್ಯ, ಅಂಬಿಗರ ಚೌಡಯ್ಯ, ಡೋಹರ ಕಕ್ಕಯ್ಯ, ಸರ್ವಜ್ಞರಂತಹ ನಾಡಿನ ಮೇರು ಶರಣ ಸಾಹಿತಿಗಳ ಬದುಕು ಹಾಗೂ ಅವರಿಂದ ರಚಿತವಾದ ವಚನಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸಿ ಅರಿವು ಮೂಡಿಸುವ ಕೇಂದ್ರವಾಗಿ, ವಚನ ಸಂಗ್ರಹಾಲಯವಾಗಿ "ವಚನ ಮಂಟಪ"ವನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಇದಕ್ಕಾಗಿ 20 ಎಕರೆ ಜಾಗವನ್ನು ಮೀಸಲಿಡಬೇಕೆಂದು ಕೋರಿದ್ದರು.
2) ವಚನ ವಿಶ್ವವಿದ್ಯಾಲಯ: ನಾಡಿನಲ್ಲಿ ಸಮಾನತೆಯ ಯೋಚನಾ ಲಹರಿಯನ್ನು ಬಲವಾಗಿ ಪ್ರತಿಪಾದಿಸಿದ, ಕನ್ನಡ ನಾಡಿನಲ್ಲಿ ಸಾಮಾಜಿಕ ನ್ಯಾಯ ಹಾಗೂ ಜನರಲ್ಲಿ ಪ್ರಜ್ಞಾವಂತ ಮನೋಭಾವವನ್ನು ಮೂಡಿಸಿದ ನೆಲಮೂಲದ ಬಸವವಾದಿ ಶರಣರ ತತ್ವಗಳನ್ನು ಸೇರಿದಂತೆ ಪ್ರಗತಿಪರ ಕರ್ನಾಟಕಕ್ಕೆ ರಹದಾರಿಯಾಗಿರುವ ಎಲ್ಲಾ ತತ್ವಗಳ ಅಧ್ಯಯನಕ್ಕಾಗಿ ಹಾಗೂ ಜಗತ್ತಿನ ಅತೀದೊಡ್ಡ ಪ್ರಜಾಪ್ರಭುತ್ವ ದೇಶದ ಸಂವಿಧಾನದಲ್ಲಿ ಅಡಗಿರುವ ಈ ತತ್ವಗಳ ಬಗ್ಗೆ ಸಾರ್ವಕಾಲಿಕವಾಗಿ ಅರಿವು ಮೂಡಿಸುವ ಮೂಲಕ ಗುರು ಬಸವಣ್ಣನವರ ಜ್ಞಾನದ ಜ್ಯೋತಿಯ ಪ್ರಕಾಶವನ್ನು ಇಡೀ ಜಗತ್ತಿಗೆ ಪ್ರಜ್ವಲಿಸುವಂತೆ ಮೂಡುವ ಸಲುವಾಗಿ ರಾಜ್ಯದಲ್ಲಿ ಒಂದು ಕೇಂದ್ರೀಕೃತ 'ವಚನ ವಿಶ್ವವಿದ್ಯಾಲಯ'ವನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿದ್ದರು.
ಈ ಎರಡೂ ಕೋರಿಕೆಗಳು ಕೇವಲ ನನ್ನದಲ್ಲ ಬಸವಣ್ಣನವರನ್ನು ಪ್ರತಿಪಾದಿಸುವ, ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ವಾಸಿಸುವ ಪ್ರತಿಯೊಬ್ಬರ ಬಯಕೆಯೂ ಆಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದರು. ಅದರಂತೆ ಕಲಬುರ್ಗಿಯಲ್ಲಿ ವಚನ ಮಂಟಪ ಸ್ಥಾಪನೆ ಮಾಡುವುದಾಗಿ ಘೋಷಣೆಯನ್ನು ಸಿಎಂ ಸಿದ್ಧರಾಮಯ್ಯ ಮಾಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ