Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೀಟ್: ಅಭ್ಯಾಸ ಮಾಡಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ : ಸಿಎಂ ಸಿದ್ದರಾಮಯ್ಯ

Advertisement
ಮೈಸೂರು : ನೀಟ್ ಪರೀಕ್ಷೆಯಲ್ಲಿ ಕೆಲವು ರ್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರುಪರೀಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

*ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ*
ಎನ್ . ಟಿ .ಎ ಪರೀಕ್ಷೆಯನ್ನು ಸರಿಯಾಗಿ ಮಾಡದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ ಎಂದರು.

ಬರಪರಿಹಾರದ ಬಾಕಿ ಮೊತ್ತವನ್ನು ರೈತರಿಗೆ ವಿತರಿಸಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

*ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ*
ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಏನು ಮಾಡಿದರೂ ದಕ್ಷಿಣ ಭಾರತದಲ್ಲಿ ಏನು ಮಾಡಿದರು ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಆರ್.ಎಸ್.ಎಸ್ ನಾ ರಾಜಕೀಯ ಮುಖವಾಡ ಅದು ಹಾಗಾಗಿ ಉತ್ತರ ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆರ್.ಎಸ್.ಎಸ್ ನ ಮುಖ್ಯಸ್ಥರು ಅಹಂಕಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ ಎಂದರು.

ರಾಯ್ ಎಂಬುವರಿಗೆ 2010 ರ್ಯಾಲಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬಂಧಿಸಲು ಆದೇಶ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯದ್ದು ದ್ವೇಷದ ರಾಜಕಾರಣ. ಹೆದರಿಸುವುದು ಬೆದರಿಸುವುದು, ಇಡಿ, ಸಿಬಿಐ ಬಳಕೆ ಮಾಡುವುದನ್ನು ಮೊದಲಿನಿಂದಲೂ ಮಾಡಿಕೊಂಡು ಬರುತ್ತಿದ್ದಾರೆ. ಅದಕ್ಕಾಗಿ ಜನ ಈ ಬಾರಿ ಅವರಿಗೆ ಬಹುಮತ ಕೊಡಲಿಲ್ಲ ಎಂದರು.

*ದ್ವೇಷದ ರಾಜಕಾರಣ ಬಿಜೆಪಿ ಕೆಲಸ*
ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಮ್ಮ ಮೇಲೆ, ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು ಎಂದು ಪ್ರಶ್ನಿಸಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು. ದ್ವೇಷದ ರಾಜಕಾರಣವೂ ಇಲ್ಲ ಪ್ರೀತಿಯ ರಾಜಕ್ಕಾರಣ ಎಂದು ಕರೆಯಬೇಕೋ. ಸೇಡಿನ ರಾಜಕಾರಣ ಮಾಡುವುದು ಅವರು ನಾವು ಯಾವತ್ತೂ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದರು.

*ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ*
ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ಅದು ಬಿಜೆಪಿಯವರ ಕೆಲಸ ಎಂದರು.

*ಎಸ್.ಸಿ.ಎಸ್.ಟಿ ವಿದ್ಯಾರ್ಥಿವೇತಬದ ಸೀಲಿಂಗ್ ಬಗ್ಗೆ ಚರ್ಚೆ*
ಎಸ್.ಸಿ.ಎಸ್.ಟಿ ಮೆರಿಟ್ ವಿದ್ಯಾರ್ಥಿವೇತನವನ್ನು ಶೇ. 60ರಿಂದ ಶೇ 75 ಕ್ಕೆ ಏರಿಸಿದ್ದು, 6 ಲಕ್ಷ ಸೀಲಿಂಗ್ ಲಿಮಿಟ್ ನಿಗದಿಪಡಿಸಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನ ಶುಲ್ಕ ಶೇ.10%ರಷ್ಟು ಹೆಚ್ಚಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನನಗೆ ಗೊತ್ತಿಲ್ಲ ವಿಚಾರ ಮಾಡುವುದಾಗಿ ತಿಳಿಸಿದರು.

*ಶೀರ್ಘದಲ್ಲಿ ಜಿ.ಪಂ/ ತಾ.ಪಂ ಚುನಾವಣೆ*
ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗಳ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿ ಚುನಾವಣೆಯನ್ನು ಆದಷ್ಟೂ ಶೀಘ್ರದಲ್ಲಿ ಮಾಡುತ್ತೇವೆ ಎಂದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ