Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಿಜೆಪಿ ವಿರುದ್ಧ ಕೆಂಡಕಾರಿದ ಸಿಎಂ ಸಿದ್ದರಾಮಯ್ಯ

 

 

ಬೆಂಗಳೂರು :
ಬಿಜೆಪಿ ವಿರುದ್ಧ ಸರಣಿ ಟ್ವಿಟ್ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಡಕಾರಿದ್ದಾರೆ.

ಕ್ರಿಮಿನಲ್‌ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡೋದು ಬಿಟ್ಟು ಜವಾಬ್ದಾರಿಯುತವಾದ ವಿಪಕ್ಷವಾಗಿ ಕೆಲಸ ಮಾಡುವ ಪ್ರಯತ್ನಿಸಿ ಎಂದು ತಿವಿದಿದ್ದಾರೆ. ಲೋಕಾಯುಕ್ತ ಪೊಲೀಸರು ಯಡಿಯೂರಪ್ಪ ಅವರನ್ನು ಬಂಧಿಸಿ, ಜೈಲಿಗಟ್ಟಿದ್ದರು. ಅವರಿಗಿಂತ ದೊಡ್ಡ ಹಿಂದೂ, ರಾಮ ಭಕ್ತ ಯಾರಿದ್ದಾರೆ? ಆವಾಗ ಬಿಜೆಪಿ ಸರ್ಕಾರ ಹಿಂದೂ ವಿರೋಧಿ ಇಲ್ಲವಾ? ಎಂದು ಪ್ರಶ್ನಿಸಿದ್ದಾರೆ.

ನಾಲ್ಕೂವರೆ ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ. ಅಪರಾಧಿಗಳಿಗೆ ಜಾತಿ,ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು.

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದು ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದು ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ?

ರಾಜ್ಯದ ಬಿಜೆಪಿಯ ಸ್ಥಿತಿ ಒಂದು ಮನೆ ನೂರು ಬಾಗಿಲು ಎಂಬಂತಾಗಿದೆ. ಆ ಪಕ್ಷದ ರಾಜ್ಯಾಧ್ಯಕ್ಷರನ್ನು ಅದೇ ಪಕ್ಷದ ಹಿರಿಯ ನಾಯಕರು ಈಗಲೂ ಒಪ್ಪಿಕೊಂಡಿಲ್ಲ, ವಿರೋಧ ಪಕ್ಷದ ನಾಯಕರ ಮಾತಿಗೆ ಸದನದಲ್ಲಿಯೇ ಸದಸ್ಯರು ಬಿಡಿಗಾಸಿನ ಕಿಮ್ಮತ್ತು ಕೊಟ್ಟಿಲ್ಲ. ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ದ ದಿನಕ್ಕೊಂದು ಗಂಭೀರ ಸ್ವರೂಪದ ಆರೋಪ ಮಾಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕನಿಷ್ಠ ಒಂದು ಎಚ್ಚರಿಕೆಯ ನೋಟೀಸ್ ನೀಡಲಾಗದಷ್ಟು ಪಕ್ಷ ನಿರ್ವಿರ್ಯವಾಗಿದೆ. ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಜನಾನುರಾಗಿಯಾಗುತ್ತಿದೆ. ಈ ಹತಾಶೆಯಿಂದ ಹೊರಬರಲು ಒಬ್ಬ ಕ್ರಿಮಿನಲ್ ಆರೋಪಿಯನ್ನು ಮುಂದಿಟ್ಟು ಬಿಜೆಪಿ ನಾಯಕರು ಕೂಗಾಡುತ್ತಿದ್ದಾರೆ.

ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು. ಹುಬ್ಬಳ್ಳಿಯ ಆರೋಪಿಯನ್ನು ಸಮರ್ಥಿಸಿಕೊಂಡು ಹೋರಾಟಕ್ಕೆ ಇಳಿದಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ ಸ್ವಲ್ಪ ಬುದ್ದಿಗಿದ್ದಿ ಹೊಂದಿದವರಿದ್ದರೆ ದಯವಿಟ್ಟು ಆ ವ್ಯಕ್ತಿಯ ಮೇಲಿನ ಆರೋಪಗಳ ಪಟ್ಟಿಯನ್ನು ತರಿಸಿ ಓದಿ, ಆ ಮೇಲೆ ಹೋರಾಟಕ್ಕೆ ಇಳಿಯಿರಿ. ಜನಸಂಖ್ಯೆಯಲ್ಲಿ ಹಿಂದೂಗಳೇ ಬಹುಸಂಖ್ಯೆಯಲ್ಲಿರುವುದರಿಂದ ಜೈಲುಗಳಲ್ಲಿರುವ ಕೈದಿಗಳಲ್ಲಿಯೂ ಹಿಂದೂ ಧರ್ಮಿಯರೇ ಬಹುಸಂಖ್ಯೆಯಲ್ಲಿದ್ದಾರೆ. ಅವರೆಲ್ಲ ಹಿಂದೂ ಧರ್ಮಕ್ಕೆ ಸೇರಿದವರು ಎನ್ನುವ ಕಾರಣಕ್ಕೆ ಬಿಜೆಪಿ ಅವರ ಪರವಾಗಿ ಹೋರಾಟ ನಡೆಸುತ್ತಾ?

ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಧಿಗಳಿಗೆ ಜಾತಿ-ಧರ್ಮದ ಬಣ್ಣಹಚ್ಚುವ ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ. ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ, ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ. ಇದು ಧರ್ಮದ್ರೋಹದ ನಡೆ. ಕಾನೂನನ್ನು ಅದರ ಪಾಡಿಗೆ ಕೆಲಸ ಮಾಡಲು ಬಿಟ್ಟು ಬಿಡಿ.

ರಾಜ್ಯದ ಬಿಜೆಪಿ ನಾಯಕರಲ್ಲಿ ಈಗಲೂ ನಾನು ವಿನಂತಿ ಮಾಡುತ್ತಿದ್ದೇನೆ. ದೇವರು-ಧರ್ಮದ ಹೆಸರಲ್ಲಿ ಕ್ಷುಲಕ ರಾಜಕೀಯ ಮಾಡುವುದನ್ನು ಕೈಬಿಟ್ಟು ಜವಾಬ್ದಾರಿಯುತವಾದ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿ. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿರುವ ಬಿಜೆಪಿ ರೀತಿಯಲ್ಲಿ ನಾವು ರಾಜ್ಯವನ್ನು ಬಿಜೆಪಿ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಹೇಳಿಕೆಗಳನ್ನು ನೀಡುವುದಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿಯನ್ನು ಶಾಶ್ವತವಾಗಿ ವಿರೋಧಪಕ್ಷದ ಸ್ಥಾನದಲ್ಲಿ ಕೂರಿಸಬೇಕೆಂಬುದು ನನ್ನ ಗುರಿ. ರಾಜ್ಯ ಬಿಜೆಪಿ ನಾಯಕರ ಇತ್ತೀಚಿನ ಅವಾಂತರಗಳನ್ನೆಲ್ಲ ನೋಡಿದರೆ ಈ ಗುರಿ ಸಾಧನೆಗೆ ಅವರೇ ಸಹಕಾರ ನೀಡುತ್ತಿರುವಂತೆ ಕಾಣುತ್ತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ