Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಇರಕೂಡದು: ಸಿ.ಎಂ.ಸಿದ್ದರಾಮಯ್ಯ

 

ಬೆಂಗಳೂರು :
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಇರಕೂಡದು. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.‌

ರಾಜ್ಯದಲ್ಲಿ ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಸಹಾಯಧನ ವಿತರಣೆ ಮತ್ತು ಪುನರ್ವಸತಿ ಸಮಾವೇಶವನ್ನು ಉದ್ಘಾಟಿಸಿ, ತಲಾ 40 ಸಾವಿರ ರೂ ಸಹಾಯಧನ ವಿತರಿಸಿ ಮಾತನಾಡಿದರು.

ಪೌರ ಕಾರ್ಮಿಕರು ಘನತೆಯಿಂದ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ನಮ್ಮ ಪಕ್ಷದ ಮತ್ತು ನಮ್ಮ ಬದ್ಧತೆ. ಹೀಗಾಗಿ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಸಫಾಯಿ ಕರ್ಮಚಾರಿಗಳ ಸಂಬಳವನ್ನು 7 ಸಾವಿರದಿಂದ 17 ಕ್ಕೆ ಏರಿಸಿದ್ದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಅವಕಾಶವೇ ಇಲ್ಲ. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ವರಿಸಿದರು.

ಸಫಾಯಿ ಕರ್ಮಚಾರಿಗಳು ಮನೆ ಕಟ್ಟಿಕೊಳ್ಳಲು 7.5 ಲಕ್ಷ ನೆರವು ನೀಡುವ ಕಾರ್ಯಕ್ರಮವನ್ನೂ ಜಾರಿಗೆ ತಂದಿದ್ದು ನಮ್ಮ ಸರ್ಕಾರವೇ. ನಾನು ಮುಖ್ಯಮಂತ್ರಿಯಾಗಿ‌ ಈ ಕಾರ್ಯಕ್ರಮಗಳನ್ನು ಜಾರಿ‌ ಮಾಡಿದೆ ಎಂದರು.

ಅಂಬೇಡ್ಕರ್ ಸಂವಿಧಾನ ನೀಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಲೇ ಇರಲಿಲ್ಲ. ಆದ್ದರಿಂದ ಸಂವಿಧಾನ ವಿರೋಧಿಗಳು ನಮ್ಮ ವಿರೋಧಿಗಳು ಎನ್ನುವುದನ್ನು ನಾವು-ನೀವು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಸಂವಿಧಾನದ ವಿರೋಧಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಿ ಎಂದು ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಮಳವಳ್ಳಿ ಶಾಸಕ ನರೇಂದ್ರಸ್ವಾಮಿ, ಮಾಯ್ಕೊಂಡ ಶಾಸಕರಾದ ಬಸಂತಪ್ಪ , ನೆಲಮಂಗಲ ಶಾಸಕ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಮಾವೇಶದಲ್ಲಿ 4000 ಕ್ಕೂ ಹೆಚ್ಚು ಸಫಾಯಿ ಕರ್ಮಚಾರಿಗಳಿಗೆ ನಗದು ಸಹಾಯಧನ ವಿತರಿಸಲಾಯಿತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ