Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ ರದ್ದುಪಡಿಸಿ; ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಒಂದುವೇಳೆ ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ತಕ್ಷಣವೇ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ. ರಾಜ್ಯದಲ್ಲಿ ಅನರ್ಹರಿಗೆ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು. ಇದೇವೇಳೆ ಅರ್ಹರು ಯಾರಿದ್ದಾರೋ ಅವರಿಗೆ ಕೊಡಿ ಎಂದು ಹೇಳಿದರು.

ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ ಮಾಡಲಾಗುತ್ತದೆ. ಈ ಕುರಿತು ಪ್ರಸ್ತಾವನೆ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು. ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಕರ್‌ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ