Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಿಸಿ ನೇಮಕದ ವಿರುದ್ಧ ಯುಜಿಸಿ ನಿಯಮಕ್ಕೆ ಸಿಎಂ ವ್ಯಗ್ರ

ಬೆಂಗಳೂರು : ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಸರ್ವಾಧಿಕಾರ ನೀಡಿ ರಾಜ್ಯ ಸರ್ಕಾರಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು,
ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ಸಣ್ಣ ಅವಕಾಶವನ್ನೂ ಬಿಟ್ಟುಕೊಡದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದ ಕಣ್ಣು ಈಗ ರಾಜ್ಯದ ವಿಶ್ವವಿದ್ಯಾಲಯಗಳ ಮೇಲೆ ಬಿದ್ದಿದೆ. ಯುಜಿಸಿ ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ಕರಡು ನಿಯಮಾಳಿಗಳನ್ನು ನಮ್ಮ ಸರ್ಕಾರ ಪರಿಶೀಲಿಸಿ, ಇದರ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯೋಚನೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಈಗಿರುವ ನಿಯಮಾವಳಿಗಳ ಪ್ರಕಾರ ಉಪಕುಲಪತಿಗಳ ನೇಮಕಾತಿಗೆ ರಾಜ್ಯ ಸರ್ಕಾರ ಶೋಧನಾ ಸಮಿತಿಯನ್ನು ರಚಿಸುತ್ತಿತ್ತು. ಅದರಲ್ಲಿ ಕುಲಪತಿಗಳಾಗಿರುವ ರಾಜ್ಯಪಾಲರು ಶಿಫಾರಸು ಮಾಡುವ ವ್ಯಕ್ತಿಗಳು ಕೂಡಾ ಸದಸ್ಯರಾಗಿರುತ್ತಿದ್ದರು. ಹೊಸ ನಿಯಮಗಳ ಪ್ರಕಾರ ರಾಜ್ಯಪಾಲರು ಸೂಚಿಸುವ ವ್ಯಕ್ತಿಯೇ ಶೋಧನಾ ಸಮಿತಿಯ ಅಧ್ಯಕ್ಷರಾಗಿರುತ್ತಾರೆ. ಇದು ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದ ಮೇಲಿನ ನೇರ ಸವಾರಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ವಿಶ‍್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಗಾಗಿ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಅರ್ಜಿಗಳನ್ನು ಆಹ್ವಾನಿಸಬೇಕೆಂದು ಯುಜಿಸಿ ಹೊಸ ನಿಯಮಾವಳಿಗಳು ಹೇಳುತ್ತಿದೆ. ಇಲ್ಲಿಯ ವರೆಗೆ ಆಯಾ ರಾಜ್ಯಗಳ ವಿದ್ವಾಂಸರಿಗಷ್ಟೇ ಸೀಮಿತವಾಗಿದ್ದ ರಾಜ್ಯಪಾಲರ ಹುದ್ದೆ ಹೊಸ ನಿಯಮಗಳು ಜಾರಿಗೆ ಬಂದರೆ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸ್ಥಾನದಲ್ಲಿ ಅನ್ಯಭಾಷಿಕರು ಬಂದು ಕೂರುವ ಅಪಾಯ ಇದೆ.
ಉಪಕುಲಪತಿಗಳ ನೇಮಕಾತಿಯ ಅರ್ಹತೆಗೆ ಸಂಬಂಧಿಸಿದಂತೆಯೂ ಕೆಲವು ಪ್ರಮುಖ ಬದಲಾವಣಿಗಳನ್ನು ಮಾಡಲಾಗಿದೆ. ಹೊಸ ನಿಯಮಗಳ ಪ್ರಕಾರ ಉಪಕುಲಪತಿಗಳನ್ನು ಕೇವಲ ಅಕಾಡೆಮಿಕ್ ವಲಯದಿಂದ ಮಾತ್ರ ನೇಮಿಸಿಕೊಳ್ಳದೆ, ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದ ಉದ್ಯಮಿಗಳು, ಸಾರ್ವಜನಿಕ ಆಡಳಿತದ ನೀತಿ ನಿರೂಪಕರು ಸೇರಿದಂತೆ ಬೇರೆ ಕ್ಷೇತ್ರದಲ್ಲಿರುವ ತಜ್ಞರನ್ನು ನೇಮಕಮಾಡಿಕೊಳ್ಳಬಹುದಾಗಿದೆ. ಇದು ಕನ್ನಡಿಗರಿಗೆ ಬಗೆಯುವ ದ್ರೋಹವಾಗಿದೆ
ಎಂದು ತಿಳಿಸಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರು ಅನಗತ್ಯವಾಗಿ ಮೂಗುತೂರಿಸುತ್ತಾ ಬಂದಿ‍ದ್ದಾರೆ. ಎಷ್ಟೋ ಸಂದರ್ಭಗಳಲ್ಲಿ ರಾಜ್ಯ ಸರ್ಕಾರದ ಶಿಫಾರಸನ್ನು ನಿರ್ಲಕ್ಷಿಸಿ ತಮ್ಮ ಆಯ್ಕೆಯನ್ನು ನಮ್ಮ ಮೇಲೆ ಹೇರುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ನಿರ್ವಹಣೆ ರಾಜ್ಯ ಸರ್ಕಾರದ ಪರಮಾಧಿಕಾರವಾಗಿದ್ದು ಇದರಲ್ಲಿ ಅನಗತ್ಯವಾದ ಮಧ್ಯಪ್ರವೇಶದಿಂದಾಗಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಘರ್ಷಣೆ ಏರ್ಪಡುವ ಸಾಧ್ಯತೆ ಇದೆ.

ಒಕ್ಕೂಟ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂತಹ ಇಂತಹ ನಡವಳಿಕೆಗಳನ್ನು ರಾಜ್ಯ ಸರ್ಕಾರ ಸಹಿಸುವುದಿಲ್ಲ. ಬಿಜೆಪಿಯೇತರ ಸರ್ಕಾರವಿರುವ ರಾಜ್ಯಗಳ ಜೊತೆಯಲ್ಲಿ ಈ ಬಗ್ಗೆ ಚರ್ಚಿಸಿ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ