Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಟೀಕೆಗಳಿಗೆ ತಲೆಕೆಡಿಸಿಕೊಳ್ಳದೇ, ಶೋಷಿತರ ಪರ ಸದಾ ನಿಲ್ಲುತ್ತೇನೆ: ಸಿಎಂ

 

ದೇವದುರ್ಗ :
ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು.ಕುರುಬರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ವೈಭವ 2024 ಸಮಾವೇಶದಲ್ಲಿ ಮಾತನಾಡಿದರು.

*ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು*
ಸಮಾಜದಲ್ಲಿ ಅವಕಾಶ ದೊರೆತವರು ಮುಂದುವರೆದರು ಮೇಲ್ಜಾತಿಯವರಾದರು. ಅವಕಾಶ ವಂಚಿತರು ಹಿಂದುಳಿದು ಕೆಳಜಾತಿಯವರಾದರು. ಚಾತುರ್ವಣ ವ್ಯವಸ್ಥೆಯನ್ನು ದೇವರು ಮಾಡಲಿಲ್ಲ. ಮನುಷ್ಯನ ಸ್ವಾರ್ಥದಿಂದಾಗಿ ನಾವು ಮಾಡಿಕೊಂಡಿದ್ದೇವೆ. ಮಹಿಳೆಯರೂ ಅವಕಾಶ ವಂಚಿತರಾಗಿದ್ದರು. ಅಂಬೇಡ್ಕರ್ ಅವರು ಎಲ್ಲರಿಗೂ ಶಿಕ್ಷಣ ಕಡ್ಡಾಯ ಎಂದು ಸಂವಿಧಾನದಲ್ಲಿ ಹೇಳಿದ್ದಾರೆ. ಅಕ್ಷರ ಸಂಸ್ಕೃತಿ ಯಿಂದ ವಂಚಿತರಾದವರು ಶೂದ್ರರಾದರು. ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಇದರ ಲಾಭ ಪಡೆದವರು ಈಗಲೂ ಆ ಪ್ರಯತ್ನ ವನ್ನು ಮಾಡುತ್ತಿದ್ದಾರೆ. ಶೋಷಣೆಗೆ ಒಳಪಟ್ಟವರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು . ಕುರುಬರೂ ಇದರಲ್ಲಿ ಸೇರಿದ್ದಾರೆ ಎಂದರು.

*ಶಿಕ್ಷಣದಿಂದ ಸ್ವಾವಲಂಬಿಗಳಾಗು ಸಾಧ್ಯ :*
ಮೇಲು , ಕೀಳೆಂದು ಜಾತಿಬೇಧ ಮಾಡುವುದು ನಿರರ್ಥಕ ಎಂದು ಬಸವಾದಿ ಶರಣರು, ಕನಕದಾಸರು ತಿಳಿಸಿದ್ದರು. ಕಾಯಕ ಮತ್ತು ದಾಸೋಹ ದಂತಹ ಮೌಲ್ಯಗಳನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಕೇವಲ ರಾಜಕೀಯ ಪ್ರಜಾಪ್ರಭುತ್ವ ಅಲ್ಲದೇ ಆರ್ಥಿಕ ಹಾಗೂ ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪಿತವಾಗಬೇಕು ಎಂದು ಡಾ. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಹಿಂದುಳಿದವರು ಕೈಗಾರಿಕೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಹೊಂದಿ ಮುಖ್ಯ ವಾಹಿನಿಗೆ ಬರಬೇಕು. ಶಿಕ್ಷಣ ಪಡೆದಾಗ ಮಾತ್ರ ದೌರ್ಜನ್ಯಗಳನ್ನು ಎದುರಿಸಿ ಸ್ವಾವಲಂಬಿಗಳಾಗಲು ಸಾಧ್ಯ ಎಂದರು.

*ಶೋಷಿತರ ಪರ ಸದಾ ನಿಲ್ಲುತ್ತೇನೆ*

ಜನರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬಲು ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಶಕ್ತಿ ಯೋಜನೆಯಡಿ 130.28 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. 1.17 ಕೋಟಿ ಕುಟುಂಬದ ಯಜಮಾನಿಗೆ ತಲಾ 2000 ರೂ. ಗೃಹಲಕ್ಷ್ಮಿ ಯೋಜನೆ, 200 ಯೂನಿಟ್ ಉಚಿತ ವಿದ್ಯುತ್ , 5 ಕೆಜಿ ಅಕ್ಕಿ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಬೆಲೆ ಏರಿಕೆಯ ಕಾಲಮಾನದಲ್ಲಿ ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಬೇಕು. ಆದ್ದರಿಂದ ಸಾರ್ವತ್ರಿಕ ಮೂಲ ಆದಾಯ ತತ್ವವನ್ನಾಧರಿಸಿ ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದೆ. ಇಂತಹ ಜನಪರ ಯೋಜನೆಗಳಿಗೆ ಟೀಕೆಗಳು ಬಂದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಶೋಷಿತರು, ಬಡವರು, ದೀನದಲಿತರು, ಅಲ್ಪಸಂಖ್ಯಾತರು, ದುರ್ಬಲವರ್ಗದವರ ಪರ ನಾನು ಸದಾ ನಿಂತಿರುತ್ತೇನೆ ಎಂದರು.

*ಚರ್ಚೆಗಳಾಗಲು ಸಮಾವೇಶಗಳು ಅಗತ್ಯ*
ಇತಿಹಾಸ ತಿಳಿಯದವರು ಭವಿಷ್ಯ ವನ್ನು ರೂಪಿಸಲು ಸಾಧ್ಯವಿಲ್ಲ. ಇತಿಹಾಸ ತಿಳಿದವರು ಮಾತ್ರ ಅವರ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದರು. ಹಿಂದೆ ಏನಾಗಿದ್ದೆವು, ಮುಂದೇನಾಗಬೇಕು ಎಂದು ಚರ್ಚೆಗಳಾಗಲು ಇಂಥ ಸಮಾವೇಶಗಳು ಅಗತ್ಯ. ಜಾತಿ ಮಾಡಿದವರೇ ಜಾತಿ ಸಮಾವೇಶ ಮಾಡಬಾರದು ಎನ್ನುತ್ತಾರೆ. ಅಂಥವರ ಬಗ್ಗೆ ಎಚ್ಚರಿಕೆ ಅಗತ್ಯ. ರಾಜಕೀಯ ಚಿಂತಕ ಲೋಹಿಯಾ ಅವರು 'ಮುಂದುವರೆದ ಜಾತಿ , ಜಾತಿ ಸಮಾವೇಶ ಮಾಡಿದರೆ ಅದು ಜಾತಿ ಸಮಾವೇಶವಾಗುತ್ತದೆ. ಹಿಂದುಳಿದ ವರು, ಶೋಷಣೆಗೆ ಒಳಪಟ್ಟವರು ಸಂಘಟನೆಗಾಗಿ ಸಮಾವೇಶ ಮಾಡಿದರೆ ಅದು ಜಾತಿ ಸಮಾವೇಶ ಅಲ್ಲ' ಎಂದಿದ್ದಾರೆ ಎಂದರು.

*ಮೂರು ಮಂತ್ರ*

ಶಿಕ್ಷಣ, ಸಂಘಟನೆ, ಹೋರಾಟ ಈ ಮೂರೂ ಮಂತ್ರಗಳನ್ನು ಹಿಂದುಳಿದವರಿಗೆ, ಶೋಷಿತರಿಗೆ ಅಂಬೇಡ್ಕರ್ ಕೊಟ್ಟಿದ್ದಾರೆ. ಸಂಘಟನೆ ಮಾಡಿ ಚರ್ಚೆ ಮಾಡದೆ ಹೋದರೆ ಹೋರಾಟ ಮಾಡಲು ಸಾಧ್ಯವಿಲ್ಲ. ಶಿಕ್ಷಣ ಇಲ್ಲದಿದ್ದರೆ ಸಂಘಟನೆ ಹೇಗೆ ಮಾಡಲು ಸಾಧ್ಯ. ಅದಕ್ಕೆ ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು ಎಂದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ