ದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜೆನ್-ಝೀಗಳ ಬಲದೊಂದಿಗೆ ಅಸ್ತಿತ್ವಕ್ಕೆ ಬಂದ ಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಇಬ್ಬಾಗವಾಗಿದೆ.
ಸಿಜೆಪಿಯ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಮನೀಶ್ ಬ್ರಹ್ಮಭಟ್ ಅವರು ಮೂಲ ಸಂಘಟನೆಯಿಂದ ಹೊರಬಂದು ಕಾಕ್ರೋಚ್ ಜನತಾ ಪಾರ್ಟಿ-ಡೆಮಾಕ್ರಟಿಕ್ (ಸಿಜೆಪಿ-ಡಿ) ಎಂಬ ನೂತನ ಬಣ ರಚಿಸಿರುವುದಾಗಿ ಘೋಷಿಸಿದ್ದಾರೆ.
ಅಭಿಜಿತ್ ದೀಪೈ ನೇತೃತ್ವದ ಮೂಲ ಸಿಜೆಪಿ ಸಂಘಟನೆಯು ಚಳವಳಿಯ ಯಶಸ್ಸಿನ ಬಳಿಕ ಕಾರ್ಯಕರ್ತರನ್ನು ಕಡೆಗಣಿಸಿದ್ದು, ಇದು ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರವಾಲ್ ಟೀಮ್ ಆಗಿ ಬದಲಾಗಿದೆ ಎಂದು ಮನೀಶ್ ಆರೋಪಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಗುರುತಿಸಿಕೊಂಡಿರುವ ಹಾಗೂ ಬೀದಿಗಿಳಿದು ಹೋರಾಡಿದ ಸ್ವಯಂಸೇವಕರನ್ನು ಕಡೆಗಣಿಸಿ 12 ಸದಸ್ಯರ ರಾಷ್ಟ್ರೀಯ ತಂಡವನ್ನು ರಚಿಸಲಾಗಿದೆ. ಇದರಲ್ಲಿ 8 ಮಂದಿ ಆಮ್ ಆದ್ಮ ಪಕ್ಷಕ್ಕೆ ಸೇರಿದವರಾಗಿದ್ದು, ಉಳಿದವರು ಕಾಲೇಜು ಸ್ನೇಹಿತರಿದ್ದಾರೆ ಎಂದು ಬ್ರಹ್ಮಭಟ್ ಹೇಳಿದ್ದಾರೆ.