Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಣೆ ಜ್ಞಾನ ವೃದ್ಧಿಗೆ ಸಹಕಾರಿ : ಬಿ.ಪಿ. ಮಾಳಗಿ 

ಬೆಳಗಾವಿ : ಮಹಾಂತೇಶ ನಗರ ರಹವಾಸಿಗಳ ಸಂಘ, ಭಾರತ ಸರ್ಕಾರದ ಅಂಚೆ ಇಲಾಖೆ ಹಾಗೂ ಬೆಳಗಾವಿ ಅಂಚೆ ಚೀಟಿ ಮತ್ತು ನಾಣ್ಯ ಸಂಗ್ರಹಣಾ ಸಂಘದ ಸಂಯುಕ್ತಾಶ್ರಯದಲ್ಲಿ "ಸಂಚಯ" ಹೆಸರಿನ ಅಂಚೆಚೀಟಿ ಹಾಗೂ ನಾಣ್ಯ ಸಂಗ್ರಹಣೆಯ 3 ದಿನದ ಪ್ರದರ್ಶನ ಸೋಮವಾರ ಮಹಾಂತೇಶ ನಗರದ ಮಹಾಂತ ಭವನದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿ.ಪಿ. ಮಾಳಗಿ ಅಂಚೆ ಇಲಾಖೆ ಭಾರತ ಸರ್ಕಾರ ಬೆಳಗಾವಿ ಅವರು, "ಅಂಚೆಚೀಟಿ ಹಾಗೂ ನಾಣ್ಯ ಸಂಗ್ರಹಣೆಯು ಜ್ಞಾನ ವೃದ್ಧಿಗೆ ಸಹಕಾರಿಯಾಗಿದೆ. ವಿವಿಧ ಕಾಲಘಟ್ಟಗಳಲ್ಲಿ ನಡೆದ ಮಹತ್ವದ ಘಟನೆಗಳಿಗೆ ಇವು ಕೈಗನ್ನಡಿಯಂತಿದ್ದು, ಉತ್ತಮ ಹವ್ಯಾಸಗಳು ವ್ಯಕ್ತಿಯ ಜೀವನಶೈಲಿಯನ್ನು ಉತ್ತಮಗೊಳಿಸುತ್ತವೆ. ಈ ಸಂಗ್ರಹಣಾ ಕೌಶಲ್ಯವು ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಉಪಯುಕ್ತವಾಗಿದೆ" ಎಂದು ಹೇಳಿದರು.

ಅಂಚೆಚೀಟಿ ಹಾಗೂ ನಾಣ್ಯ ಸಂಗ್ರಹಣಾ ಸಂಘದ ಅಧ್ಯಕ್ಷ ಪ್ರಸಾದ ಹಿರೇಮಠ ಮಾತನಾಡಿ, "ಈ ಹವ್ಯಾಸವು ಮೊಬೈಲ್ ಬಳಕೆಯಿಂದ ದೂರವಿರಿಸಿ, ಸೃಜನಾತ್ಮಕ ಶಕ್ತಿಯನ್ನು ವೃದ್ಧಿಸುತ್ತದೆ. ಸಂಘವು ಕಳೆದ 15 ವರ್ಷಗಳಿಂದ ಸಂಗ್ರಹಣಾ ಕ್ಷೇತ್ರದಲ್ಲಿ ಅನೇಕ ಸಾಧನೆಗಳನ್ನು ಮಾಡಿದೆ" ಎಂದು ತಿಳಿಸಿದರು.

ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ನಿರ್ಮಲಾ ಬಟ್ಟಲ ಮಾತನಾಡಿ, "ಅಂಚೆಚೀಟಿ ಮತ್ತು ನಾಣ್ಯ ಸಂಗ್ರಹಣೆಯು ಇತಿಹಾಸವನ್ನು ಮರುಸೃಷ್ಟಿಸುವ ಸಾಧನಗಳಾಗಿದ್ದು, ದೇಶ-ವಿದೇಶಗಳ ಇತಿಹಾಸವನ್ನು ಅರಿಯಲು ಸಹಕಾರಿಯಾಗುತ್ತದೆ. ಭಾವಿ ಶಿಕ್ಷಕರು ಈ ಕೌಶಲ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು" ಎಂದು ಕರೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಮಹಾಂತೇಶ ನಗರ ರಹವಾಸಿಗಳ ಸಂಘದ ಅಧ್ಯಕ್ಷ ಲಕ್ಷ್ಮಿಕಾಂತ ಗುರುವ ಅವರು, "ಇಂದು ಮರೆಮಾಚಿರುವ ಅನೇಕ ಐತಿಹಾಸಿಕ ಸತ್ಯಾಂಶಗಳನ್ನು ಇಂತಹ ಪ್ರದರ್ಶನಗಳ ಮೂಲಕ ತಿಳಿದುಕೊಳ್ಳಬಹುದು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು" ಎಂದು ಹೇಳಿದರು.

ಅಂಚೆ ಇಲಾಖೆಯ ಅಧಿಕಾರಿಗಳು, ಮಹಾಂತೇಶ ನಗರ ರಹವಾಸಿಗಳ ಸಂಘ ಹಾಗೂ ಅಂಚೆಚೀಟಿ-ನಾಣ್ಯ ಸಂಗ್ರಹಣಾ ಸಂಘದ ಪದಾಧಿಕಾರಿಗಳು, ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಚಾರ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಸುಮಾರು 1,500 ವಿದ್ಯಾರ್ಥಿಗಳು ಪ್ರದರ್ಶನವನ್ನು ವೀಕ್ಷಿಸಿದರು. 3 ದಿನಗಳ ಕಾಲ ನಡೆಯುವ ಈ ಪ್ರದರ್ಶನವನ್ನು ಸಾರ್ವಜನಿಕರು ಉಪಯೋಗ ಪಡೆಯಬೇಕು.

ಪ್ರಶಿಕ್ಷಣಾರ್ಥಿ ಪ್ರಿಯಾಂಕಾ ಚೌಗಲಾ ನಿರೂಪಿಸಿದರು. ಡಾ. ಎಸ್.ವಿ. ವಾಲಿಶೆಟ್ಟಿ ಸ್ವಾಗತಿಸಿ ನಿರೂಪಿಸಿದರು. ಶ್ರೀಕಾಂತ ಪಾಟೀಲ ವಂದಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ