Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಣೆ ಕಾರ್ಯ ಬಹಳ ಶ್ರಮದಾಯಕವಾದದ್ದು: ಅನಿಲ ಬೆನಕೆ 

ಬೆಳಗಾವಿ : ಮಹಾಂತೇಶ ನಗರ ರಹವಾಸಿಗಳ ಸಂಘ, ಭಾರತ ಸರ್ಕಾರದ ಅಂಚೆ ಇಲಾಖೆ ಹಾಗೂ ಬೆಳಗಾವಿ ಅಂಚೆಚೀಟಿ ಮತ್ತು ನಾಣ್ಯ ಸಂಗ್ರಹಣಾ ಸಂಘದ ಸಂಯುಕ್ತಾಶ್ರಯದಲ್ಲಿ "ಸಂಚಯ" ಹೆಸರಿನ ಅಂಚೆಚೀಟಿ ಹಾಗೂ ನಾಣ್ಯ ಸಂಗ್ರಹಣೆಯ 3 ದಿನದ ಪ್ರದರ್ಶನ ಕಾರ್ಯಕ್ರಮದ 2 ನೇ ದಿನ ಮಂಗಳವಾರ ಮಹಾಂತೇಶ ನಗರದ ಮಹಾಂತ ಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಶಾಸಕ ಅನಿಲ ಬೆನಕೆ ಅವರು ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಣೆ ಬಹಳ ಶ್ರಮದಾಯಕವಾದದ್ದು, ಅಷ್ಟೆ ಸಂತೋಷ ನೀಡುವ ಕೆಲಸ, ಈ ಹೆಸರಿನಲ್ಲಿ ವಂಚನೆ ಮಾಡುವರಿದ್ದಾರೆ. ನಿಜವಾದ ಹವ್ಯಾಸಿಗಳು ಜಾಗೃತ ರಾಗಿರಬೇಕೆಂದು ಹೇಳಿದರು.

ಶ್ರೀನಿವಾಸ ಚವ್ಹಾನ ಮುಖ್ಯಸ್ಥರು ಫಿಲಾಟಲ್ ಬ್ಯೂರು ರವರು ಮಾತನಾಡಿ  ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಣೆ ಬೆಳೆದು ಬಂದ ಪರಂಪರೆ ಹಾಗೂ ಉದ್ದೇಶ , ಮಹತ್ವವನ್ನು ವಿವರಿಸಿದರು.

ಆದೇಶ ಬರಡೆ ರವರು ಮೌರ್ಯ, ಗುಪ್ತ ಸೇರಿದಂತೆ ವಿವಿಧ ಸಾಮ್ರಾಜ್ಯಗಳ ಇತಿಹಾಸವನ್ನು ಈ ಸಂಗ್ರಹಣೆ  ವಿದ್ಯಾರ್ಥಿಗಳಿಗೆ ತಿಳಿಸುವ ಕಾರ್ಯ  ಮಾಡುತ್ತದೆ. ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕೆಂದು ಕರೆನೀಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಲಕ್ಷ್ಮೀಕಾಂತ ಗುರುವ ಅಧ್ಯಕ್ಷರು ಮಹಾಂತೇಶ ನಗರ ರಹವಾಸಿಗಳ ಸಂಘ ರವರು ವಿದ್ಯಾರ್ಥಿಗಳು ವಿವಿಧ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.

ಮಹಾಂತೇಶ ನಗರ ರಹವಾಸಿಗಳ ಸಂಘದ ಗೌರವ ಕಾರ್ಯದರ್ಶಿ ಸಂಜೀವ ಎಸ್  ಪಟ್ಟಣಶೆಟ್ಟಿ , ಆಡಳಿತ ಮಂಡಳಿ ನಿರ್ದೇಶಕ ವಿ. ಎಂ. ಹೆದ್ದೂರಶೆಟ್ಟಿ, ರಾಜಶೇಖರ ಡೋಣಿ, ಅಂಚೆ ಚೀಟಿ ಹಾಗೂ ನಾಣ್ಯ ಸಂಗ್ರಹಣಾ ಸಂಘದ ಅಧ್ಯಕ್ಷ ಪ್ರಸಾದ ಹಿರೇಮಠ ಹಾಗೂ ಗಣ್ಯರು , ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ವೃಂದ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ಪ್ರಶಿಕ್ಷಣಾರ್ಥಿ ರುತಿಕಾ ಜಾಲಿಹಾಳ ಪ್ರಾರ್ಥಿಸಿದರು, ಶಿಕ್ಷಕ ಶ್ರೀಕಾಂತ ಪಾಟೀಲ ಸ್ವಾಗತಿಸಿದರು, ಶಿಕ್ಷಕ ಪ್ರತಾಪ ಕುಮಾರ ವಂದಿಸಿದರು, ಪ್ರೊ. ಮಂಜುನಾಥ ಕಲಾಲ ನಿರೂಪಿಸಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಹುಕೋಟಿ ವಂಚನೆ : ನೀಲಣ್ಣವರ, ಆಪ್ತರ ನಿವಾಸಗಳ ಮೇಲೆ ಇಡಿ ದಾಳಿSIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶಈ ನಿಗೂಢ ಬಾವಿಯಲ್ಲಿ ಮತ್ತೆ ಅಚ್ಚರಿ ; ಸಮುದ್ರದ ಅಲೆಯಂತೆ ತನ್ನಷ್ಟಕ್ಕೆ ತಾನೇ ಏರಿಳಿಯುವ ನೀರು..!ವಿಭಾಗೀಯ ಕಚೇರಿಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲು ಕ್ರಮ ಕೈಕೊಂಡವರು ಅರಸುಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು...!ಯುವಜನತೆ  ಪಠ್ಯ ಮತ್ತು ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ : ಕುಲಪತಿ ತ್ಯಾಗರಾಜಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ  ಲಕ್ಷ್ಮೀ ಇದ್ದರೆ DK ಸಂಪುಟಕ್ಕೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿ