Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಕಲಾವಿದ ಚಂದ್ರಶೇಖರ ಸಿದ್ದಿ ಆತ್ಮಹತ್ಯೆ

Advertisement
ಕಾರವಾರ : ಜನಪ್ರಿಯ ರಿಯಾಲಿಟಿ ಶೋ ‘ಕಾಮಿಡಿ ಕಿಲಾಡಿಗಳು’ ಮೂಲಕ ರಾಜ್ಯಕ್ಕೆ ಪರಿಚಿತರಾಗಿದ್ದ ಕಲಾವಿದ ಚಂದ್ರಶೇಖರ ಸಿದ್ದಿ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಿಮ್ಮಳ್ಳಿ ಗ್ರಾಮದ ಸಿದ್ದಿ ಸಮುದಾಯಕ್ಕೆ ಸೇರಿದ ಚಂದ್ರಶೇಖರ, ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜ್ಯಾದ್ಯಂತ ಹೆಸರು ಮಾಡಿದ್ದರು. ನಿನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಅವರು ಉತ್ತಮ ಯೋಗಪಟು ಕೂಡ ಆಗಿದ್ದರು
ಕಳೆದ 2-3 ತಿಂಗಳಿಂದ ಚಂದ್ರಶೇಖರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಕಾರಣಕ್ಕಾಗಿ ಅವರಿಗೆ ವೈದ್ಯೋಪಚಾರವನ್ನೂ ಕೊಡಿಸಲಾಗಿತ್ತು. ಜುಲೈ 31ರಂದು ಮಧ್ಯಾಹ್ನ, ಪತ್ನಿಯ ಜೊತೆ ಕಟ್ಟಿಗೆ ಗ್ರಾಮದಲ್ಲಿ ಕೆಲಸಕ್ಕೆ ಹೋಗಿದ್ದಾಗ, ಶೌಚಾಲಯಕ್ಕೆ ಹೋಗುವುದಾಗಿ ಹೇಳಿ ಹೋದ ಚಂದ್ರಶೇಖರ ವಾಪಸ್‌ ಬಂದಿರಲಿಲ್ಲ. ಇದರಿಂದ ಅವರನ್ನು ಹುಡುಕಿಕೊಂಡು ಹೋದಾಗ, ಅವರು ಸಮೀಪದ ಅರಣ್ಯದಲ್ಲಿ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಲಾವಿದ ಚಂದ್ರಶೇಖರ ಅವರ ಅಕಾಲಿಕ ನಿಧನಕ್ಕೆ ಹಿತೈಷಿಗಳು, ಅಭಿಮಾನಿಗಳು ಆಘಾತ ವ್ಯಕ್ತಪಡಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ