Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕುಡಚಿಯಿಂದ ಸ್ಪರ್ಧೆ : ಕೊನೆಗೂ ರಾಜೀವ ಸ್ಪಷ್ಟೋಕ್ತಿ ಏನು ?

 

ಕುಡಚಿ :
ಕುಡಚಿ ಶಾಸಕ ಪಿ. ರಾಜೀವ ಈ ಬಾರಿ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಸ್ಪರ್ಧೆ ನಡೆಸುತ್ತಾರಾ ಎಂಬ ಗೊಂದಲಗಳು ಕೆಲ ದಿನಗಳಿಂದ ನಿರ್ಮಾಣವಾಗಿತ್ತು. ಅವರೇ ಈ ಬಗ್ಗೆ ಸ್ಪಷ್ಟೋಕ್ತಿ ನೀಡಿದ್ದಾರೆ.

ವಿಧಾನಸಭಾ ಚುನಾವಣೆಗೆ ಯಾವ ಮತ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಗೊಂದಲಗಳಿಗೆ ಸ್ವತಃ ಕುಡಚಿ ಪ್ರಭಾವಿ ಬಿಜೆಪಿ ಶಾಸಕ ಹಾಗೂ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ ಅವರೇ ಕೊನೆಗೂ ತೆರೆ ಎಳೆದಿದ್ದಾರೆ. ಕಾರ್ಯಕ್ರಮ ಒಂದರಲ್ಲಿ ತಮ್ಮ ಮತದಾರರ ಮನದಾಳದ ಇಂಗಿತ ಅರಿತು ಭಾವನಾತ್ಮಕವಾಗಿ ಮಾತನಾಡಿದ ಅವರು, ಯಾವ ಕಾರಣಕ್ಕೂ ಬೇರೆ ಕ್ಷೇತ್ರಕ್ಕೆ ನಾನು ಹೋಗುವ ಪ್ರಶ್ನೆ ಇಲ್ಲ. ವಿಧಾನಸಭಾ ಚುನಾವಣೆಗೆ ಕುಡಚಿ ವಿಧಾನಸಭಾ ಮತಕ್ಷೇತ್ರದಿಂದಲೇ ಬಿಜೆಪಿಯಿಂದ ಮತ್ತೊಂದು ಸಲ ಕಣಕ್ಕಿಳಿಯುವುದಾಗಿ ಸ್ಪಷ್ಟ ಮಾತುಗಳಲ್ಲಿ ಹೇಳಿದರು. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಊಹಾಪೋಹಕ್ಕೆ ಕೊನೆಗೂ ತಾರ್ಕಿಕ ಅಂತ್ಯ ಬಿದ್ದಂತಾಗಿದೆ. ಪಿ.ರಾಜೀವ ಅವರು ಚಿತ್ತಾಪುರ ಮತಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬ ವದಂತಿ ಹರಡಿತ್ತು. ಜೊತೆಗೆ ಶಿರಹಟ್ಟಿಯಿಂದಲೂ ಸ್ಪರ್ಧೆ ನಡೆಸುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಎರಡೂ ಮತಕ್ಷೇತ್ರಗಳಲ್ಲಿ ಗಣನೀಯ ಪ್ರಮಾಣದಲ್ಲಿ ಬಂಜಾರ ಮತಗಳು ಇವೆ. ಬಿಜೆಪಿ ಹೈಕಮಾಂಡ್ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸುಪುತ್ರ ಹಾಲಿ ಶಾಸಕ ಪ್ರಿಯಾಂಕ ಖರ್ಗೆ ಅವರನ್ನು ಸೋಲಿಸುವ ನಿಟ್ಟಿನಲ್ಲಿ ಚಿತ್ತಾಪುರದಿಂದ ರಾಜೀವ ಅವರನ್ನು ಸ್ಪರ್ಧೆಗಿಳಿಸಲಿದ್ದಾರೆ ಎಂಬ ಮಾತು ಹಲವು ದಿನಗಳಿಂದ ಹರಿದಾಡಿತ್ತು. ಆದರೆ, ಇದೀಗ ರಾಜೀವ ಅವರೇ ಈ ಕುರಿತ ಎಲ್ಲಾ ವದಂತಿಗಳಿಗೂ ತೆರೆ ಎಳೆದಿದ್ದಾರೆ.

*ರಾಜೀವ ಭಾವನಾತ್ಮಕ ಮಾತೇನು ?:*
ನೀವು ಅನ್ನ ಕೊಟ್ಟವರು, ನೀವು ಬದುಕು ಕೊಟ್ಟವರು, ನೀವು ಭರವಸೆ ಕೊಟ್ಟವರು, ನಾನು ಎಲ್ಲಿಯವರೆಗೆ ರಾಜಕಾರಣ ಮಾಡುತ್ತೇನೋ ಅಲ್ಲಿವರೆಗೆ ನಿಮ್ಮ ಕೈ ಬಿಡಲಾರೆ. ಸುಮ್ಮನೆ ಏನೋ ವಿರೋಧ ಪಕ್ಷದವರು ಪಾಪ ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆ ನಾನೇಕೆ ಟೆನ್ಶನ್ ಮಾಡಿಕೊಳ್ಳಲಿ. ಕುಡಚಿಗೆ ನಿಲ್ಲುತ್ತೇನೆ. ಆ ಬಗ್ಗೆ ಯಾವ ಗೊಂದಲವೂ ಇಲ್ಲ. ಕುಡಚಿಗೆ ನಿಲ್ಲುವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ