Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಲಯಾಳ ಮಸೂದೆ ಬಗೆಗಿನ ಕಳವಳ ಆಧಾರರಹಿತ: ಸಿದ್ದರಾಮಯ್ಯ ಪತ್ರಕ್ಕೆ ಪಿಣರಾಯಿ

ತಿರುವನಂತಪುರ: 'ಕೇರಳ ಸರ್ಕಾರದ ಮಲಯಾಳ ಭಾಷಾ ಮಸೂದೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ವ್ಯಕ್ತಪಡಿಸುತ್ತಿರುವ ಕಳವಳವು ಆಧಾರ ರಹಿತವಾಗಿದೆ. ಅಲ್ಲದೇ, ಮಸೂದೆಯು ಕೇರಳದಲ್ಲಿರುವ ಭಾಷಾ ಅಲ್ಪಸಂಖ್ಯಾತರ ಮೇಲೆ ಮಲಯಾಳ ಹೇರಿಕೆಗೆ ಎಡೆಮಾಡುವುದಿಲ್ಲ' ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ.

ಮಸೂದೆಗೆ ಸಂಬಂಧಿಸಿದಂತೆ ಕಳವಳ ವ್ಯಕ್ತಪಡಿಸಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಬರೆದಿದ್ದ ಪತ್ರಕ್ಕೆ ಪಿಣರಾಯಿ ಬುಧವಾರ ಪ್ರತ್ಯುತ್ತರ ನೀಡಿದ್ದಾರೆ.

'ಕೇರಳದ ಶಾಲೆಗಳಲ್ಲಿ ಭಾಷಾ ಅಲ್ಪಸಂಖ್ಯಾತರು ಮಲಯಾಳವನ್ನೇ ಪ್ರಥಮ ಭಾಷೆಯಾಗಿ ಕಡ್ಡಾಯವಾಗಿ ಕಲಿಯಬೇಕು ಎಂಬ ಹೇರಿಕೆ ಮಸೂದೆಯಲ್ಲಿಲ್ಲ. ಬದಲಿಗೆ ಭಾಷಾ ಅಲ್ಪಸಂಖ್ಯಾತರು ತಮ್ಮ ಮಾತೃ ಭಾಷೆಯೊಂದಿಗೆ ಕೇರಳದ ಶಾಲೆಗಳಲ್ಲಿ ಮಲಯಾಳ ಭಾಷೆಯನ್ನೂ ಅಧ್ಯಯನ ಮಾಡುವಂತಹ ಆಯ್ಕೆಯನ್ನಷ್ಟೇ ನೀಡಲಾಗುತ್ತಿದೆ' ಎಂದು ಅವರು ತಿಳಿಸಿದ್ದಾರೆ.

ಹತ್ತನೇ ತರಗತಿ ಹಾಗೂ ಪ್ರೌಢ ಮಾಧ್ಯಮಿಕ ಶಿಕ್ಷಣದಲ್ಲಿ ಮಲಯಾಳ ಭಾಷಾ ಪರೀಕ್ಷೆಗಳನ್ನು ಕಡ್ಡಾಯಗೊಳಿಸಲಾಗಿಲ್ಲ. ಕೇರಳದ ಸರ್ಕಾರಿ ಕಚೇರಿಗಳಲ್ಲಿ ಭಾಷಾ ಅಲ್ಪಸಂಖ್ಯಾತರು ಸಂವಹನಕ್ಕೆ ಹಾಗೂ ಉತ್ತರಗಳನ್ನು ಪಡೆಯಲು ಕನ್ನಡ ಮತ್ತು ತಮಿಳು ಭಾಷೆಗಳನ್ನು ಬಳಸಲು ಕೂಡ ಮಸೂದೆ ಅವಕಾಶ ನೀಡಿದೆ. ಭಾಷಾ ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸುವ ಯಾವುದೇ ಅಂಶವೂ ಮಸೂದೆಯಲ್ಲಿ ಇಲ್ಲ' ಎಂದೂ ಪಿಣರಾಯಿ ಸ್ಪಷ್ಟನೆ ನೀಡಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು