Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯುವ ನಿಧಿ ಯೋಜನೆ ಜನವರಿ 1ರಿಂದ ಆರಂಭ

 

ಬೆಂಗಳೂರು:
ಪದವೀಧರರಿಗೆ 3 ಸಾವಿರ ರೂ.ಗಳು ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ರೂ.ಗಳ ಭತ್ಯೆ ನೀಡುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಪ್ರಾರಂಭವಾಗಲಿದೆ. ಯೋಜನೆ ಜನವರಿ 1ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್‌ ಮಾಡಿರುವ ಅವರು, 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹರು ಎಂದು ತಿಳಿಸಿದ್ದಾರೆ.

ಈ ಯೋಜನೆಯು 2024 ಜನವರಿ 1ರಿಂದ ಜಾರಿಗೆ ಬರಲಿದೆ ಮತ್ತು ಇದಕ್ಕೆ ಅರ್ಜಿದಾರರು ‘ಸೇವಾ ಸಿಂಧು’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಈ ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂ. ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ನೀಡಲಾಗುತ್ತದೆ. ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಈ ವರ್ಷದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು ಮತ್ತು ಅದರಲ್ಲಿ ‘ಯುವ ನಿಧಿ’ ಒಂದಾಗಿದೆ. ಈ ಮುಂಚೆ ಡಿಸೆಂಬರ್ 26 ರಿಂದ ‘ಯುವ ನಿಧಿ’ ನೋಂದಣಿ ಪ್ರಾರಂಭವಾಗಲಿದೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಹೇಳಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ