Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸುವರ್ಣಸೌಧ ನಿರ್ವಹಣೆಗೆ ಶಾಶ್ವತ ಯೋಜನೆಗೆ ಚಿಂತನೆ

 

ಬೆಳಗಾವಿ :
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ ನಲ್ಲಿ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿವೇಶನದ ಪೂರ್ವಸಿದ್ಧತೆಯನ್ನು ಮಂಗಳವಾರ(ನ.7) ಪರಿಶೀಲಿಸಿದರು.

ಸುವರ್ಣ ವಿಧಾನಸೌಧವನ್ನು ಬೆಂಗಳೂರಿನ ವಿಧಾನಸೌಧದ ಮಾದರಿಯಲ್ಲಿ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಆರಂಭದಲ್ಲಿ ಸುವರ್ಣ ವಿಧಾನಸೌಧ ಕಟ್ಟಡವನ್ನು ವೀಕ್ಷಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಅವರು, ಪಶ್ಚಿಮ ಪ್ರವೇಶದ್ವಾರದ ಕೆಲವು ಕಡೆಗಳಲ್ಲಿ ಬಣ್ಣ ಮಾಸಿರುವುದು ಹಾಗೂ ಕಲೆಗಳಿರುವುದನ್ನು ಸರಿಪಡಿಸಲು ಸೂಚಿಸಿದರಲ್ಲದೇ ವರ್ಷವಿಡೀ ಸುವರ್ಣ ಸೌಧದ ಉತ್ತಮ ನಿರ್ವಹಣೆಗೆ ಸಂಬಂಧಿಸಿದಂತೆ‌ ಶಾಶ್ವತ ಯೋಜನೆ ರೂಪಿಸಲಾಗುವುದು.

ಇದಾದ ಬಳಿಕ ವಿಧಾನಸಭೆ ಸಭಾಂಗಣ, ಸಭಾಧ್ಯಕ್ಷರ ಕೊಠಡಿಗಳನ್ನು ಪರಿಶೀಲಿಸಿದರು.

ಧ್ವನಿವರ್ಧಕ, ಸ್ವಚ್ಛತೆ, ಆಸನ ವ್ಯವಸ್ಥೆ, ವಿದ್ಯುಚ್ಛಕ್ತಿ, ಅಂತರ್ಜಾಲ ಸಂಪರ್ಕ, ಟಿವಿ ಪರದೆ, ಕಂಪ್ಯೂಟರ್ ಸೇರಿದಂತೆ ಅಧಿವೇಶನ ಸಂದರ್ಭದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು.
ವಿಧಾನಸಭೆ ಸಭಾಂಗಣದಲ್ಲಿ ದೊಡ್ಡ ಪರದೆಯ ಟಿವಿ ಅಳವಡಿಸಬೇಕು. ಸಭಾಧ್ಯಕ್ಷರ ಕುರ್ಚಿ ಎದುರು ಎಲ್ಲ ಶಾಸಕರ ಹೆಸರು ಹಾಗೂ ಆಸನ ಸಂಖ್ಯೆಯ ಮಾಹಿತಿಯನ್ನು ಪ್ರದರ್ಶಿಸುವ ಚಾರ್ಟ್ ಅಳವಡಿಸಬೇಕು ಎಂದು ತಿಳಿಸಿದರು.

ನಂತರ ಸೆಂಟ್ರಲ್ ಹಾಲ್, ಪರಿಷತ್ ಸಭಾಂಗಣ, ಸಭಾಪತಿ ಕೊಠಡಿ. ವಿರೋಧ ಪಕ್ಷದ ಮೊಗಸಾಲೆ, ಮಂತ್ರಿಗಳ ಮೊಗಸಾಲೆ, ಕ್ಯಾಬಿನೆಟ್ ಹಾಲ್, ಆಡಿಟೋರಿಯಂ ಮತ್ತಿತರ ಸ್ಥಳಗಳನ್ನು ಪರಿಶೀಲಿಸಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ,ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ, ಜಿಲ್ಲಾ ಪಂಚಾಯತ್ ಮುಖ್ಯ‌ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ, ವಿಧಾನಸಭೆ ಕಾರ್ಯದರ್ಶಿವಿಶಾಲಾಕ್ಷಿ ಮತ್ತಿತರರು ಉಪಸ್ಥಿತರಿದ್ದರು.

ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸೊಬರದ ಹಾಗೂ ಇತರೆ ಅಧಿಕಾರಿಗಳು, ಸುವರ್ಣ ವಿಧಾನಸೌಧದ ನಿರ್ವಹಣೆಯ ಕುರಿತು ವಿವರಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ