Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಭವ್ಯ ಶಿವಾಜಿ ಮೂರ್ತಿ ಉದ್ಘಾಟನೆಗೆ ಕ್ಷಣಗಣನೆ

 

ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಛಲ ಮತ್ತು ಶ್ರದ್ಧೆ: ರಾಷ್ಟ್ರ ಮಟ್ಟದಲ್ಲಿ ಪ್ರವಾಸಿ ತಾಣವಾಗಿ ಬೆಳಗಾವಿ ಹೆಸರು

ಬೆಳಗಾವಿ:
ನುಡಿದಂತೆ ನಡೆದ ಛಲಗಾರ್ತಿ, ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಮನೆಮಗಳಾಗಿ ಕ್ಷೇತ್ರದ ಜನರ ಸಂಕಷ್ಟಗಳಿಗೆ ಮಿಡಿಯುವುದರ ಜೊತೆಗೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜನರ ಭಾವನೆ ಅರಿತುಕೊಂಡು ತಾಲೂಕಿನ ರಾಜಹಂಸಗಡದಲ್ಲಿ ಸುಮಾರು 3 ಕೋಟಿ ರೂ. ಸರಕಾರದ ಅನುದಾನ ಹಾಗೂ ವೈಯಕ್ತಿ ಒಂದು ಕೋಟಿ ರೂ.ಗಳಲ್ಲಿ ನಿರ್ಮಿಸಿರುವ ಬೃಹತ್ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಉದ್ಘಾಟನೆಗೆ ಸಜ್ಜಾಗಿದ್ದು, ಹೊಸ ಇತಿಹಾಸ ನಿರ್ಮಾಣವಾಗಿದೆ.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅಭಿವೃದ್ಧಿಯ ಕಾರ್ಯವನ್ನು ಸಹಿಸದ ರಾಜಕೀಯ ವಿರೋಧಿಗಳು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿವಾಜಿ ಮೂರ್ತಿ ಉದ್ಘಾಟನೆಯಲ್ಲಿ ಹಸ್ತಕ್ಷೇಪ ಮಾಡಿ ತರಾತುರಿಯಲ್ಲಿ, ಇನ್ನೂ ಬಣ್ಣ ಬಳಿಯುವ ಮುನ್ನವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕರೆಸಿ ಉದ್ಘಾಟನೆ ಮಾಡಿಸಿದ್ದು, ಕ್ಷೇತ್ರದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದರೂ ಶಿವಾಜಿ ಮೂರ್ತಿ ಸ್ಥಾಪನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕೊನೆಯ ಗಳಿಗೆಯಲ್ಲಿ ರಾಜಕೀಯ ವಿರೋಧಿಗಳು ಮಾಡಿದ ಕುತಂತ್ರವನ್ನು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಜನರು ಎಂದಿಗೂ ಮರೆಯುವುದಿಲ್ಲ.
ಲಕ್ಷ್ಮೀ ಹೆಬ್ಬಾಳ್ಕರ್ ಗ್ರಾಮೀಣ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೊಡಮಾಡಿದ್ದಾರೆ. ಬಿಜೆಪಿ ಸರಕಾರದಲ್ಲಿ ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಅವರ ಮನವೊಲಿಸಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಣ ಮಂಜೂರು ಮಾಡಿಸಿದ್ದಾರೆ. ಅಷ್ಟೆ ಅಲ್ಲ ಪ್ರವಾಸೋದ್ಯಮದ ಇಲಾಖೆಯಿಂದ ರಾಜಹಂಸಗಡ ಅಭಿವೃದ್ಧಿಗೆ, ಬೃಹತ್ ಶಿವಾಜಿ ಮೂರ್ತಿಗೆ ಹೆಬ್ಬಾಳ್ಕರ್ ಅವರು ಹೆಚ್ಚುವರಿ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜಕೀಯ ವಿರೋಧಿಗಳಿಗೆ ಟಕ್ಕರ್ ಕೊಡಲು ಗಟ್ಟಿಯಾಗಿ ನಿಂತಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಹಲವಾರು ನಾಯಕರನ್ನು ಆಹ್ವಾನಿಸಿ ಶಿವಾಜಿ ಮೂರ್ತಿಯನ್ನು ಉದ್ಘಾಟಿಸಲಿದ್ದಾರೆ. ಈ ಸಂಬ್ಧ ಶನಿವಾರವೇ ಶಾಸ್ತ್ರೋಕ್ತ ಕಾರ್ಯಕ್ರಮಗಳು ನಡೆದಿವೆ. ಭಾನುವಾರ ಶಿವಾಜಿ ಮೂರ್ತಿಯ ಉದ್ಘಾಟನಾ ಸಮಾರಂಭ ಕ್ಷೇತ್ರದಲ್ಲಿ ಶಾಸಕಿ ಹೆಬ್ಬಾಳ್ಕರ್ ಅವರಿಗೆ ವರದಾನವಾಗಿ ಪರಿಣಮಿಸಲಿದೆ.
----------------------------

ಲಕ್ಷ್ಮೀ ಗೆ ಸಹೋದರ, ಪುತ್ರನ ಸಾಥ್
ಸದ್ಯ ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯವಾಗಿ ಬೆಳೆದು ನಿಂತಿದ್ದಾರೆ. ಇದಕ್ಕೆ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಪುತ್ರ, ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಮತ್ತು ಕ್ಷೇತ್ರದ ಜನರ ಸಹಕಾರ ಕಾರಣವಾಗಿದೆ. ಅಲ್ಲದೆ, ಮರಾಠಿ ಭಾಷಿಕರನ್ನು ತಮ್ಮತ್ತ ಸೆಳೆಯುವಲ್ಲಿ ಲಕ್ಷ್ಮೀ ಯಶಸ್ವಿಯಾಗಿದ್ದಾರೆ. ಇದನ್ನು ಸಹಿಸದ ಕೆಲ ರಾಜಕೀಯ ವಿರೋಧಿಗಳು ಎಲ್ಲದಕ್ಕೂ ಹೆಬ್ಬಾಳ್ಕರ್ ವಿರುದ್ಧ ಹೇಳಿಕೆ ನೀಡುವುದು ನಿರಂತರವಾಗಿದೆ.
-----------------------------------

ರಾಜ್ಯದ ಗಮನ ಸೆಳೆಯುವಂತೆ ಮಾಡಿದ ಗ್ರಾಮೀಣ ಕ್ಷೇತ್ರ
ಕಳೆದ 2013ರ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೋಲಾಗಿದ್ದರೂ ಮನೆಯಲ್ಲಿ ಕುಳಿತುಕೊಳ್ಳದೆ ಕ್ಷೇತ್ರದ ಜನರ ಸಂಕಷ್ಟಗಳಿಗೆ ಸ್ಪಂದಿಸುವುದರ ಮೂಲಕ 2018ರ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 52 ಸಾವಿರ ಮತಗಳಲ್ಲಿ ಭರ್ಜರಿ ಗೆಲವು ದಾಖಲಿಸಿ ವಿರೋಧಿಗಳ ಬಾಯಿ ಮುಚ್ಚಿಸಿದ್ದರು. ಅದರಂತೆ ಕಳೆದ ನಾಲ್ಕುವರೆ ವರ್ಷಗಳಲ್ಲಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರವನ್ನು ರಾಜ್ಯದ ಜನ ನೋಡುವ ಹಾಗೆ ಅಭಿವೃದ್ಧಿ ಮಾಡಿದ್ದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್. ಇವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಕೆಲ ವಿರೋಧಿಗಳು, ರಾಜಹಂಸಗಡ ಕೋಟೆಯಲ್ಲಿ ಬೃಹತ್ ಶಿವಾಜಿ ಮೂರ್ತಿಯ ಮೇಲೆ ವಕ್ರದೃಷ್ಟಿ ಬೀರಿ, ಹೆಬ್ಬಾಳ್ಕರ್ ಒಬ್ಬ ಮಹಿಳೆ ಎನ್ನುವುದನ್ನು ಮರೆತು ವೈಯಕ್ತಿವಾಗಿ ಆರೋಪ ಮಾಡಿದ್ದು ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳು ಹಾಗೂ ಕ್ಷೇತ್ರದ ಜನರಿಗೆ ನೋವು ಉಂಟು ಮಾಡಿದೆ.

--------------------------
ದಶಕಗಳ ಕನಸು ನನಸು ಮಾಡಿದ ಮನೆ ಮಗಳು
ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಬರುವ ರಾಜಹಂಸಗಡದ ಕೋಟೆಯಲ್ಲಿ ಶಿವಾಜಿ ಮೂರ್ತಿ ಸ್ಥಾಪನೆ ಮಾಡಬೇಕು. ಹಿಂದೂ ಸಾಮ್ರಾಟ್ ಛತ್ರಪತಿ ಶಿವಾಜಿಯ ಇತಿಹಾಸದ ಕೋಟೆಯಲ್ಲಿಯೇ ನಿರ್ಮಿಸಬೇಕೆಂಬ ಕ್ಷೇತ್ರದ ಜನರ ಬೇಡಿಕೆಯನ್ನು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸರಕಾರದ ದುಂಬಾಲು ಬಿದ್ದು 3 ಕೋಟಿ ರೂ. ಅನುದಾನ ತಂದು, ಜೊತೆಗೆ ವೈಯಕ್ತಿಕವಾಗಿ ಒಂದು ಕೋಟಿ ರೂ. ಹಾಕಿ ಬೃಹತ್ ಶಿವಾಜಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದು ಕ್ಷೇತ್ರದ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
------------------------------
ನನ್ನ ಹಾಗೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಜನರ ಕನಸು ನನಸಾಗುವ ಕಾಲ ಇದು. ಮಾ.5ಕ್ಕೆ ರಾಜಹಂಸಗಡದಲ್ಲಿ ಬೃಹತ್ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಉದ್ಘಾಟನೆಯಾಗುತ್ತಿರುವದು ಇತಿಹಾಸದಲ್ಲಿ ಸುವರ್ಣ ಅಕ್ಷರದಲ್ಲಿ ಬರೆದಿಡುವಂಥದ್ದಾಗಿರುತ್ತದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕೆಂದು ಎಲ್ಲರಲ್ಲೂ ವಿನಂತಿಸುತ್ತೇನೆ.

-ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕಿ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ