Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿಯು ಸಜ್ಜಾಗಿದೆ. ಗುರುವಾರ (ಅಕ್ಟೋಬರ್ 3) ಬೆಳಿಗ್ಗೆ 9.15ರಿಂದ 9.45ರೊಳಗೆ ಚಾಮುಂಡಿಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯೊಂದಿಗೆ ಹತ್ತು ದಿನಗಳ ಉತ್ಸವ ಗರಿಗೆದರಲಿದೆ.

ಪ್ರೊ.ಹಂ.ಪ. ನಾಗರಾಜಯ್ಯ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಪಾಲ್ಗೊಳ್ಳಲಿದ್ದಾರೆ. ಬಳಿಕ ನಗರದ ವಿವಿಧ ವೇದಿಕೆಗಳಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಮೊದಲ ದಿನ ಹನ್ನೊಂದು ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ.

ಕುಪ್ಪಣ್ಣ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ, ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಚಲನಚಿತ್ರೋತ್ಸವ, ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳ, ದೊಡ್ಡಕೆರೆ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿ, ವಸ್ತುಪ್ರದರ್ಶನ, ಕಾವಾ ಆವರಣದಲ್ಲಿ ಶಿಲ್ಪ, ಚಿತ್ರಕಲೆ ಹಾಗೂ ಕರಕುಶಲ ಕಲೆಗಳ ಪ್ರದರ್ಶನ, ಭಾರತ್ ಸೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಕನ್ನಡ ಪುಸ್ತಕ ಮಾರಾಟ ಮೇಳ, ರಂಗಾಯಣದಲ್ಲಿ 'ನವರಾತ್ರಿ ಜಾನಪದ ರಂಗೋತ್ಸವ' ಹಾಗೂ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ಆರಂಭಗೊಳ್ಳಲಿವೆ.

ನಾಡಹಬ್ಬ ದಸರಾ ಮಹೋತ್ಸವಕ್ಕೆ ಚಾಲನೆ ದೊರಕಲು ಕ್ಷಣಗಣನೆ ಶುರುವಾಗಿದ್ದು, ಗುರುವಾರ ಬೆಳಿಗ್ಗೆ ದಟ್ಟ ಮಂಜು ಮುಸುಕಿದ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಗರಿಗೆದರಿದೆ.

ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಉತ್ಸವ ಶುರುವಾಗಲಿದ್ದು, ಉತ್ಸವ ಮೂರ್ತಿಯನ್ನು ದೇವಾಲಯದ ಸುತ್ತ ಪ್ರದಕ್ಷಿಣೆ ತರುವ ವೇಳೆ, ನೆರೆದಿದ್ದ ಗ್ರಾಮಸ್ಥರು, ಪೊಲೀಸ್‌ ಸಿಬ್ಬಂದಿ ಕೈಮುಗಿದು ನಮಸ್ಕರಿಸಿದರು. ದೇವಿಯ ಫೋಟೋ ತೆಗೆದುಕೊಂಡರು.

ಪ್ರೊ.ಹಂಪನಾ ಉತ್ಸವಕ್ಕೆ ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ.

ಬೆಟ್ಟದ ದಾರಿಯುದ್ದಕ್ಕೂ ಪೊಲೀಸರ ಬಿಗಿ ಭದ್ರತೆ ಏರ್ಪಡಿಸಿದ್ದು, ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು