Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಕರಾಳ ಸಂಕ್ರಾಂತಿ ಆಚರಣೆಗೆ ಕರೆ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸದಿದ್ದರೆ, ರಾಜ್ಯದಾದ್ಯಂತ ಕರಾಳ ಸಂಕ್ರಾಂತಿ ಆಚರಿಸಲಾಗುವುದು ಎಂದು ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ ಎಚ್ಚರಿಕೆ ನೀಡಿದರು.

ಘಟನೆ ನಡೆದ ಸ್ಥಳಕ್ಕೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶ ಗೋವನ್ನು ಪವಿತ್ರ ಎಂದು ಪರಿಗಣಿಸಿದೆ. ಸಂಕ್ರಾಂತಿ ಹಬ್ಬದಲ್ಲೂ ಗೋವನ್ನು ಪೂಜಿಸಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಹೊಸ ವರ್ಷಕ್ಕೆ ಬೆಲೆ ಏರಿಕೆಯ ಕೊಡುಗೆ ನೀಡಿದೆ. ಅದೇ ರೀತಿ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಸುವಿನ ಕೆಚ್ಚಲು ಕೊಯ್ದುಹಾಕುವ ಕೊಡುಗೆಯನ್ನು ನೀಡಿದೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಾನು ಈವರೆಗೆ ನೋಡಿಲ್ಲ ಎಂದರು.

ನೂರಾರು ವರ್ಷಗಳಿಂದ ಚಾಮರಾಜಪೇಟೆಯಲ್ಲಿ ಪಶು ಆಸ್ಪತ್ರೆ ಇದೆ. ಈ ಭೂಮಿಯನ್ನು ವಕ್ಫ್ ಮಂಡಳಿಗೆ ಸೇರಿಸಲು ಪ್ರಯತ್ನ ನಡೆದಿತ್ತು. ಆಗ ಸರ್ಕಾರದ ವಿರುದ್ಧ ಪ್ರತಿಭಟಿಸುವುದರ ಜೊತೆಗೆ, ಕೋರ್ಟ್ ಮೊರೆ ಹೋಗಲಾಯಿತು. ಪ್ರತಿಭಟನೆಯ ಸಮಯದಲ್ಲಿ ಇವೇ ಹಸುಗಳನ್ನು ತೋರಿಸಲಾಗಿತ್ತು. ಅದಕ್ಕಾಗಿಯೇ ಮಚ್ಚು, ಡ್ರಾಗ‌ರ್ ಬಳಸಿ ಹಸುಗಳ ಕೆಚ್ಚಲು ಕೊಯ್ದು, ಕಾಲು ಕತ್ತರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ನಾಯಕರು ಮತಕ್ಕಾಗಿ ದೇವಸ್ಥಾನಕ್ಕೆ ಹೋಗುತ್ತಾರೆ. ಆದರೆ ಯಾರಿಗೂ ಹಿಂದೂ ಧರ್ಮದ ಬಗ್ಗೆ ಶ್ರದ್ದೆ ಇಲ್ಲ. ಹಿಂದೂಗಳಲ್ಲಿ ಭೀತಿ ಹುಟ್ಟಿಸಲು ಜಿಹಾದಿಗಳು ಹೀಗೆ ಮಾಡಿದ್ದರೂ ಕಾಂಗ್ರೆಸ್ ನಾಯಕರು ಇದನ್ನು ಖಂಡಿಸುವುದಿಲ್ಲ. ಈಗ ಯಾವ ಮುಖ ಇಟ್ಟುಕೊಂಡು ಸಂಕ್ರಾಂತಿ ಆಚರಣೆ ಮಾಡುತ್ತಾರೆ? ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಕರಾಳ ಸಂಕ್ರಾಂತಿ ಆಚರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ಭಾಗದಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿದರೆ ಅದನ್ನು ಕಿತ್ತುಕೊಂಡು ಹೋಗುತ್ತಾರೆ. ಈಗ ಆ ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಬೆದರಿಕೆ ಹಾಕುವ ಕೆಲಸ ಮಾಡಿದ್ದಾರೆ. ಎಸಿಪಿ ಜೊತೆ ಮಾತಾಡಿದ್ದು, ತಕ್ಷಣ ಕ್ರಮ ವಹಿಸುವಂತೆ ಸೂಚಿಸಿದ್ದೇನೆ. ಇಲ್ಲವಾದರೆ ತೀವ್ರವಾದ ಪ್ರತಿಭಟನೆ ಮಾಡುತ್ತೇವೆ. ಕಾಂಗ್ರೆಸ್ ಸಚಿವರು, ಮುಖ್ಯಮಂತ್ರಿ ಈ ಕಡೆ ತಿರುಗಿಯೂ ನೋಡಲ್ಲ ಎಂದರು.

ಒಂದು ಹಸು 20 ಲೀಟರ್ ಹಾಲು ನೀಡುತ್ತಿತ್ತು. ಈಗ ಯಾವುದೇ ಹಸುಗಳು ಬದುಕುವ ಸ್ಥಿತಿಯಲ್ಲೇ ಇಲ್ಲ. ಪಶು ಸಂಗೋಪನೆ ಮಾಡುವವರಿಗೆ ನಾವು ಸಹಾಯ ಮಾಡುತ್ತೇವೆ. ಸರ್ಕಾರ ನೆರವು ನೀಡಬೇಕೆಂದು ಆಗ್ರಹಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ