Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜನಸಾಮಾನ್ಯರಲ್ಲಿ ಕಾನೂನು ಅರಿವು ಮೂಡಿಸುವುದು ಅತ್ಯಂತ ಅಗತ್ಯ: ಸಂದೀಪ ಪಾಟೀಲ

ಬೆಳಗಾವಿ : ಜನರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವುದು ತುಂಬಾ ಮುಖ್ಯವಾಗಿದೆ. ಜನರಿಗೆ ಕಾನೂನಿನ ಬಗ್ಗೆ ತಿಳಿವಳಿಕೆ ಇಲ್ಲದೆ ಕಾನೂನು ಸರಿಯಾಗಿಲ್ಲ ಎಂದು ಹಲವರು ತಿಳಿದಿದ್ದಾರೆ. ಅದನ್ನು ಹೋಗಲಾಡಿಸಲು ಅನೇಕ ಉಚಿತ ಕಾನೂನು ಕಾರ್ಯಕ್ರಮಗಳು ಹಳ್ಳಿ-ಹಳ್ಳಿಗಳಲ್ಲಿ ನಡೆಸಲಾಗುತ್ತಿದೆ ಎಂದು

ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ಹೇಳಿದರು.

ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಪಂತ ಬಾಳೇಕುಂದ್ರಿ ಗ್ರಾಮದಲ್ಲಿ ಏರ್ಪಡಿಸಲಾದ ಉಚಿತ ಕಾನೂನು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನರಿಗೆ ಕಾನೂನು ಅರಿವು ಬಗ್ಗೆ, ಉಚಿತ ಕಾನೂನು ಸಲಹೆ, ಮಹಿಳಾ ಕಾನೂನುಗಳ ಕುರಿತು , ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಿದರು.

ಮಾರಿಹಾಳ ಪೊಲೀಸ್ ಠಾಣೆಯ ಸಿಪಿಐ ಐ.ಆರ್. ಪಟ್ಟಣಶೆಟ್ಟಿ ಅವರು ಜನರಿಗೆ ಕಾನೂನು ನಿಯಮಗಳ ಪಾಲನೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು.

ಅಧ್ಯಕ್ಷತೆ ವಹಿಸಿದ್ದ
ಕಾರ್ಯಕ್ರಮದ ಸಂಯೋಜಕರಾದ,ರಾಜಾ ಲಖಮಗೌಡ ಕಾನೂನು ಮಹಾ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಚೇತನಕುಮಾರ ಟಿ.ಎಂ, ಜನರಿಗೆ ಅನೇಕ ನೈಜ ಘಟನೆಗಳ ಬಗ್ಗೆ ಮನಃ ಮುಟ್ಟುವಂತೆ ವಿವರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಕೋಲಕಾರ, ಸಹಾಯಕ ಪ್ರಾಧ್ಯಾಪಕ ಪ್ರೀತಮ್ ರೇವಣಕರ್ ಉಪಸ್ಥಿತರಿದ್ದರು. ಈ ಕಾರ್ಯಕ್ರಮ ಜನರಲ್ಲಿ ಕಾನೂನು ಜಾಗೃತಿ ಹೆಚ್ಚಿಸಲು ಯಶಸ್ವಿಯಾಯಿತು. ಜನರು ತಮ್ಮ ಹಕ್ಕುಗಳನ್ನು ತಿಳಿದುಕೊಂಡರು ಮತ್ತು ಅಗತ್ಯವಿದ್ದಲ್ಲಿ ಕಾನೂನು ಸಹಾಯ ಪಡೆಯಲು ಸಿದ್ಧ ಎಂದರು.

ರಾಜಾ ಲಕಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ತುಂಬಾ ಉತ್ಸಾಹದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. 3 ನೇ ವರ್ಷದ ವಿದ್ಯಾರ್ಥಿ ಸಂಜನಾ ಇಟಗಿ ನಿರೂಪಿಸಿದರು. ರು.ತು. ನ್ಯಾಮಗೌಡ ವಂದಿಸಿದರು. ಸಚಿನ ಕೋಟಗಿ ವಂದಿಸಿದರು. ಜಯಶ್ರೀ ಕಾಂಬಳೆ ಕಾರ್ಯಕ್ರಮಕ್ಕೆ ಸಹಕರಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ