Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೈ ಸೇರ್ಪಡೆ : ಲಕ್ಷ್ಮಣ ಸವದಿ ಕುರಿತು ವದಂತಿ ಸೃಷ್ಟಿ !

ಲಕ್ಷ್ಮಣ ಸವದಿ ಬಿಜೆಪಿಯ ಅತ್ಯಂತ ನಂಬಿಗಸ್ಥ ನಾಯಕ. ಬಿಜೆಪಿ ಸಂಘಟನೆಯಲ್ಲಿ ತೊಡಗಿಸಿಕೊಂಡು ರಾಷ್ಟ್ರೀಯ ನಾಯಕರ ಮನಗೆದ್ದವರು. ನೇರವಾಗಿ ದೆಹಲಿ ನಾಯಕರ ಜೊತೆ ನಿಕಟ ನಂಟು ಹೊಂದಿದವರು. ಆದರೆ ಅವರು ಇದೀಗ ಪಕ್ಷಕ್ಕೆ ದ್ರೋಹ ಎಸಗಿ ಕಾಂಗ್ರೆಸ್ ಸೇರುವ ಪ್ರಶ್ನೆ ಎದುರಾಗದು. 

ತೆರೆ ಎಳೆದ ಯುವ ನಾಯಕ :
ಲಕ್ಷ್ಮಣ ಸವದಿ ಅವರು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗುವ ಯಾವುದೇ ಸಾಧ್ಯತೆ ಇಲ್ಲ. ಇದು ಕೇವಲ ಸುಳ್ಳು ಸುದ್ದಿ ಎಂದು ಯುವ ಬಿಜೆಪಿ ಯುವನಾಯಕ ಚಿದಾನಂದ ಸವದಿ ಜನಜೀವಾಳಕ್ಕೆ ತಿಳಿಸಿದ್ದಾರೆ.

ಬೆಳಗಾವಿ : ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುತ್ತಾರಾ ಎಂಬ ಚರ್ಚೆ ಜೋರಾಗಿದೆ.ಆದರೆ ಲಕ್ಷ್ಮಣ ಸವದಿ ಅವರನ್ನು ಹತ್ತಿರದಿಂದ ಬಲ್ಲವರು ಹೇಳುವಂತೆ, ಅವರು ಅಥಣಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಪ್ರಶ್ನೆ ಎದುರಾಗದು ಎಂದು ಹೇಳುತ್ತಾರೆ.

ಕೆಲ ಮೂಲಗಳು ಲಕ್ಷ್ಮಣ ಸವದಿ ಅವರು ದೆಹಲಿಯಲ್ಲಿದ್ದು ಕಾಂಗ್ರೆಸ್ ಸೇರಲಿದ್ದಾರೆ ಎಂದು ವರದಿ ಮಾಡಿವೆ. ಆದರೆ ಲಕ್ಷ್ಮಣ ಸವದಿ ಅವರು ಮಂಗಳವಾರ ಅಥಣಿಯಲ್ಲಿ ಇರುವುದು ಖಚಿತಪಟ್ಟಿದ್ದು ವಿವಿಧ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಲಕ್ಷ್ಮಣ ಸವದಿ ಅವರು ಯಾವುದೇ ಕಾರಣಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವುದಿಲ್ಲ. ಕಳೆದ 20 ವರ್ಷಗಳಿಂದ ಬಿಜೆಪಿಯಲ್ಲಿ ಅತ್ಯಂತ ನಿಷ್ಠೆಯಿಂದ ಕೆಲಸ ಮಾಡುತ್ತಾ ಬಂದಿದ್ದಾರೆ. ಆದರೆ ಅದನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ವಿರೋಧಿ ಬಣ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಸೃಷ್ಟಿಸಿರುವುದು ಗೊತ್ತಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ