Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಡಾಕ್ಟರೆಟ್‌ಗೆ ಮುಕ್ತ ವಿವಿಗೆ ಸಿ.ಟಿ. ರವಿ ಪ್ರಬಂಧ ಸಲ್ಲಿಕೆ

 

ಬೆಂಗಳೂರು:
ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಟಿ. ರವಿ ಅವರು ತಾವು ಸಲ್ಲಿಸಿದ್ದ ಮಹಾಪ್ರಬಂಧ 'ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳು: ಒಂದು ಅಧ್ಯಯನ'ದ ಮೌಖಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ಕೆ.ಜೆ.ಸುರೇಶ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದಾರೆ. ಪಿಎಚ್‌ಡಿ ಪದವಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗಕ್ಕೆ ಮಹಾಪ್ರಬಂಧವನ್ನು ಸಲ್ಲಿಕೆ ಮಾಡಿದ್ದಾರೆ.

ಪಿಎಚ್ ಡಿ ಮೌಖಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದರೊಂದಿಗೆ ಸಿಟಿ ರವಿ ಅವರ ಪಿಎಚ್​ಡಿ ಅಂತಿಮ ಹಂತಕ್ಕೆ ಬಂದಂತಾಗಿದೆ.

ಮೌಖಿಕ ಪರೀಕ್ಷೆಯನ್ನು ಯಶಸ್ವಿಗೊಳಿಸಿರುವ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ (ಕರಾಮುವಿ) ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸಿಟಿ ರವಿ ಇದೀಗ ಅದೇ ವಿವಿಯಲ್ಲಿ ಪಿಎಚ್​ಡಿ ಪದವಿ ಪಡೆದುಕೊಳ್ಳುತ್ತಿರುವುದು ವಿಶೇಷ. ಸಿಟಿ ರವಿ ಅವರು ಪಿಎಚ್​ಡಿಗೆ ಸಂಬಂಧಿಸಿದಂತೆ ಇತ್ತೀಚೆಗೆ ನವದೆಹಲಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿ ಮಾಡಿ ಮಾಹಿತಿ ಕಲೆ ಹಾಕಿದ್ದರು. ವಿಧೇಯ ವಿದ್ಯಾರ್ಥಿಯಂತೆ ದೇವೇಗೌಡರ ಬಳಿ ಸಂಶೋಧನಾ ಮಾಹಿತಿ ಪಡೆದುಕೊಂಡಿದ್ದರು. ಈ ಬಗ್ಗೆ ಸ್ವತಃ ಸಿಟಿ ರವಿ ಅವರೇ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ