Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ದರ್ಶನ್ ಸೇರಿ ಆರೋಪಿಗಳಿಗೆ ಪೊಲೀಸ್ ಕಸ್ಟಡಿ; ಕಣ್ಣೀರಿಟ್ಟ ನಟ

 

 

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ , ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಮಂಗಳವಾರ ಸಂಜೆ ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಕಸ್ಟಡಿಗೆ ಕೇಳಲು ರಿಮ್ಯಾಂಡ್ ಅರ್ಜಿಯನ್ನು ಪೊಲೀಸರು ಸಲ್ಲಿಸಿದ್ದರು. ಪೊಲೀಸರ ಪರ ಸರ್ಕಾರಿ ಅಭಿಯೋಜಕ ವಾದ ಮಂಡಿಸಿ, ಸಾಕ್ಷ್ಯಗಳ ನಾಶ ಆಗಿರುವುದರಿಂದ ದರ್ಶನ್‌ ಅವರನ್ನು 14 ದಿನ ಕಸ್ಟಡಿಗೆ ನೀಡುವಂತೆ ಕೋರಿದರು. ಆದರೆ, ದರ್ಶನ್‌ ಪರ ವಕೀಲ 14 ದಿನ ಯಾಕೆ ಎಂದು ಪ್ರಶ್ನಿಸಿದರು. ಈಗಾಗಲೇ ದರ್ಶನ್‌ ಮೊಬೈಲ್‌ ಸೀಜ್‌ ಆಗಿದೆ, ದರ್ಶನ್‌ ಅವರ ತೇಜೋವಧೆ ಮಾಡಲು ಈ ರೀತಿ ಮಾಡಲಾಗುತ್ತಿದೆ ಹೇಳಿದರು.

ಆರೋಪಿಗಳನ್ನು ಕಸ್ಟಡಿಗೆ ನೀಡಲು ಸರ್ಕಾರಿ ಅಭಿಯೋಜಕ ಕೋರಿದರೆ, ದರ್ಶನ್‌ ಪರ ವಕೀಲ ಅವರಿಗೆ ಕಿರುಕುಳ ನೀಡಬಾರದು, ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂದು ಮನವಿ ಮಾಡಿದರು. ವಾದ- ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಪೊಲೀಸ್‌ ಕಸ್ಟಡಿಗೆ ನೀಡಲು ಸೂಚಿಸಿದರು. ನ್ಯಾಯಾಧೀಶರು ಪೊಲೀಸ್‌ ಕಸ್ಟಡಿಗೆ ಎಂದು ಹೇಳಿದ ಕೂಡಲೇ ನಟ ದರ್ಶನ್‌ ಕಣ್ಣೀರಿಟ್ಟಿದ್ದು ಕಂಡುಬಂತು.

ಹೀಗಾಗಿ ದರ್ಶನ್‌ ಅವರನ್ನು ಕಸ್ಟಡಿಗೆ ನೀಡಲಾಗಿದೆ. ಇದಕ್ಕೂ ಮುನ್ನಾ ಆರೋಪಿಗಳಿಗೆ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಸಿಜಿ, ಬಿ.ಪಿ., ಶುಗರ್‌ ಇನ್ನಿತರ ಟೆಸ್ಟ್‌ ಮಾಡಲಾಗಿದ್ದು, ಯಾರಿಗೂ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಬೌರಿಂಗ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳಕ್ಕೆ ಪೊಲೀಸರು, ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಈ ವೇಳೆ ಕೆಲ ವಸ್ತುಗಳನ್ನು ಎಫ್ಎಸ್ಎಲ್ ತಂಡ ಸಂಗ್ರಹಿಸಿದೆ. ವಸ್ತುಗಳನ್ನು ಸೀಜ್ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ