ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬುಧವಾರ ಜೈಲಿನಿಂದ ಬಿಡುಗಡೆಯಾಗಿರುವ ನಟ ದರ್ಶನ್ ಅವರು ಪತ್ನಿ ವಿಜಯ ಲಕ್ಷ್ಮಿ ಜೊತೆ ಅವರ ಮನೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮಗ ವಿನೀತ್ ಗೆ ಜನ್ಮದಿನ. ಹೀಗಾಗಿ ರಾತ್ರಿ ಕೇಕ್ ಕತ್ತರಿಸಿ ಸಂಭ್ರಮಿಸಲಾಗಿದೆ. ಮಗನ ಜೊತೆ ಅವರು ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ನಂತರ ಊಟ ಮಾಡಿ ವಿಶ್ರಾಂತಿ ಪಡೆದುಕೊಂಡು ನಾಲ್ಕೂವರೆ ತಿಂಗಳ ನಂತರ ಮನೆಯಲ್ಲಿ ದಿನ ಕಳೆದಿದ್ದಾರೆ. ಅನಾರೋಗ್ಯದ ಕಾರಣ ಅವರು ಜೈಲಿನಿಂದ ಹೊರಬಂದಿದ್ದು ವೈದ್ಯಕೀಯ ಚಿಕಿತ್ಸೆಗೆ ಇಂದು ಮಧ್ಯಾಹ್ನ ಅವರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ. ಎಲ್ಲಿ ಬೇಕಿದ್ದರೂ ಅವರಿಗೆ ಚಿಕಿತ್ಸೆ ಪಡೆಯುವ ಅವಕಾಶ ಇದೆ. ಹೀಗಾಗಿ ಎಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಕಾದು ನೋಡಬೇಕು.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.