Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮನಮೋಹನ ಸಿಂಗ್ ಅಂತ್ಯಕ್ರಿಯೆಗೆ ದಿನ ನಿಗದಿ

ನವದೆಹಲಿ: ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ (92) ಅವರು ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ಡಿ.28 ರಂದು ನಡೆಯಲಿದೆ ಎಂದು ಕಾಂಗ್ರೆಸ್‌ ತಿಳಿಸಿದೆ.

ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರ ಅಂತಿಮ ಸಂಸ್ಕಾರ ಶನಿವಾರ ನಡೆಯಲಿದೆ. ಈ ಬಗ್ಗೆ ನಾವು ಶುಕ್ರವಾರ ಅಧಿಕೃತವಾಗಿ ಘೋಷಿಸುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಗುರುವಾರ ತಡರಾತ್ರಿ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಬಗ್ಗೆ 'ಎನ್‌ಡಿ ಟಿವಿ' ವರದಿ ಮಾಡಿದೆ.

ಮನಮೋಹನ್ ಸಿಂಗ್ ಅವರ ಗೌರವಾರ್ಥ, ಮುಂದಿನ ಏಳು ದಿನಗಳಲ್ಲಿ ನಿಗದಿಯಾಗಿದ್ದ ಸ್ಥಾಪನಾ ದಿನ ಸೇರಿ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದು ಮಾಡುವುದಾಗಿ ಕಾಂಗ್ರೆಸ್‌ ತಿಳಿಸಿದೆ.

ಅಂತಿಮ ದರ್ಶನ ಪಡೆದ ಕಾಂಗ್ರೆಸ್‌ ನಾಯಕರು
ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಏಮ್ಸ್‌ನಿಂದ ಗುರುವಾರ ತಡರಾತ್ರಿ ಮೋತಿಲಾಲ್ ನೆಹರು ಮಾರ್ಗದಲ್ಲಿರುವ ಅವರ ನಿವಾಸಕ್ಕೆ ತರಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಅಂತಿಮ ದರ್ಶನ ಪಡೆದಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ