Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯಸಭೆ ಚುನಾವಣೆಗೆ ದಿನ ನಿಗದಿ

 

ದೆಹಲಿ:
ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಸೇರಿದಂತೆ ರಾಜ್ಯಸಭೆಯ 10 ಸದಸ್ಯರು ಜುಲೈ, ಆಗಸ್ಟ್‌ನಲ್ಲಿ ನಿವೃತ್ತಿಯಾಗುತ್ತಿದ್ದು, ಆ ಸ್ಥಾನಗಳಿಗೆ ಜುಲೈ 24ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.

ಗೋವಾದಿಂದ ಒಬ್ಬರು, ಗುಜರಾತ್‌ನಿಂದ ಮೂವರು, ಪಶ್ಚಿಮ ಬಂಗಾಳದಿಂದ ಆರು ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ.

ಗುಜರಾತ್‌ನಿಂದ ಆಯ್ಕೆಯಾಗಿದ್ದ ಬಿಜೆಪಿಯ ಜೈಶಂಕರ್, ದಿನೇಶ್‌ಚಂದ್ರ ಜೆಮಲ್‌ಭಾಯ್‌ ಅನವದೀಯ, ಲೋಖಂಡವಾಲಾ ಜುಗಲ್‌ ಸಿನ್ಹಾ ಮಾಥೂರ್‌ಜಿ ಹಾಗೂ ಪಶ್ಚಿಮ ಬಂಗಾಳದಿಂದ ಆಯ್ಕೆಯಾಗಿದ್ದ ತೃಣಮೂಲ ಕಾಂಗ್ರೆಸ್‌ನ ಡೆರ್ರೆಕ್‌ ಒ ಬ್ರಿಯಾನ್, ಡೊಲಾ ಸೆನ್, ಪ್ರದೀಪ್‌ ಭಟ್ಟಾಚಾರ್ಯ, ಸುಶ್ಮಿತಾ ದೇವ್, ಸುಖೇಂದು ಶೇಖರ್‌ ರೇ, ಶಾಂತಾ ಛೆಟ್ರಿ ಅವರ ಅವಧಿ ಆ.18ಕ್ಕೆ ಮುಗಿಯಲಿದೆ.

ಗೋವಾದಿಂದ ಆಯ್ಕೆಯಾಗಿರುವ ಬಿಜೆಪಿ ಎಂಪಿ ವಿನಯ್‌ ಡಿ. ತೆಂಡೂಲ್ಕರ್‌ ಅವರ ಅವಧಿಯು ಜುಲೈ 28ಕ್ಕೆ ಅಂತ್ಯವಾಗಲಿದೆ.

ಅಲ್ಲದೆ, ತೃಣಮೂಲ ಕಾಂಗ್ರೆಸ್‌ನ ಲುಜಿನ್ಹೊ ಫಲೆರೊ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಜುಲೈ 24ರಂದೇ ಉಪ ಚುನಾವಣೆ ನಡೆಯಲಿದೆ. ಅವರ ಅಧಿಕಾರವಧಿ ಏಪ್ರಿಲ್‌ 2026ರವರೆಗೂ ಇತ್ತು. ಕೆಲ ತಿಂಗಳ ಹಿಂದೆ ರಾಜೀನಾಮೆ ನೀಡಿದ್ದರು.

ಈ ಸ್ಥಾನಗಳ ಭರ್ತಿಗೆ ಜುಲೈ 6ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರಗಳ ಸಲ್ಲಿಕೆಗೆ ಜುಲೈ 13 ಕಡೆಯ ದಿನವಾಗಿದ್ದು, ವಾಪಸಾತಿಗೆ ಜುಲೈ 17 ಕಡೆಯದಿನ. ಮತದಾನ ಜುಲೈ 24ರಂದು ನಡೆಯಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ