Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಸೇವಿಸಲು ಡಿಸಿ ನಿತೇಶ್ ಪಾಟೀಲ ಸಲಹೆ

 

ಬೆಳಗಾವಿ: ಬಿಸಿಲಿನ ಬೇಗೆ ತೀವ್ರವಾಗಿರುವುದರಿಂದ ಶರೀರದ ದಾಹ ಹಾಗೂ ಬಾಯಾರಿಕೆಯನ್ನು ನೀಗಿಸಲು ಆಯುಷ್ ಇಲಾಖೆ ಪರಿಚಯಿಸಿರುವ ಚಿಂಚಾ ಪಾನಕ(ಹುಣಸೆ ಹಣ್ಣಿನ ಪಾನಕ)ವನ್ನು ಸಾರ್ವಜನಿಕರು ಸೇವಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆಯ ವತಿಯಿಂದ ಆರೋಗ್ಯಕರ ಚಿಂಚಾ ಪಾನಕ(ಹುಣಸೆ ಹಣ್ಣಿನ ಪಾನಕ)ವನ್ನು ಸಾರ್ವಜನಿಕರು ಹಾಗೂ ಕರ್ತವ್ಯನಿರತ ಕಚೇರಿಯ ಸಿಬ್ಬಂದಿಗೆ ವಿತರಿಸಿ ಮಾತನಾಡಿದರು.
ಎಲ್ಲೆಡೆ ಬಿಸಿಲಿನ ತಾಪ ಹೆಚ್ಚುತ್ತಿರುವುದರಿಂದ ಆರೋಗ್ಯ ರಕ್ಷಣೆಗೆ ದೇಹವನ್ನು ತಂಪಾಗಿಟ್ಟುಕೊಳ್ಳುವುದು ಅಗತ್ಯವಾಗಿದೆ. ಆದ್ದರಿಂದ ಹೆಚ್ಚು ಹೆಚ್ಚು ನೀರು ಕುಡಿಯುವುದರ ಜತೆಗೆ ಆಯುಷ್ ಇಲಾಖೆಯಿಂದ ಪರಿಚಯಿಸಲಾಗುವ ಪಾನಕ ಮತ್ತಿತರರ ಪಾನೀಯ ಸೇವಿಸುವಂತೆ ತಿಳಿಸಿದರು.
ಇದೇ ವೇಳೆ ಮಾತನಾಡಿದ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶ್ರೀಕಾಂತ ಸುಣಧೋಳಿ ಅವರು, ಹುಣಸೆ ಹಣ್ಣಿನ ಪಾನಕ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುವುದರ ಜತೆಗೆ ಬಾಯಾರಿಕೆ ನಿವಾರಿಸಲಿದೆ ಎಂದರು.
ಚುನಾವಣಾ ತರಬೇತಿ ನೋಡಲ್ ಅಧಿಕಾರಿ ಶಂಕರಾನಂದ‌ ಬನಶಂಕರಿ, ಆಯುಷ್ ಇಲಾಖೆಯ ಡಾ.ಚಂದ್ರಶೇಖರ್ ಸಿದ್ದಾಪುರ, ಡಾ.ಸುಚೇತಾ ದೇಸಾಯಿ, ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.
ಪಾನಕ ತಯಾರಿಸುವ ವಿಧಾನ: ಪ್ರತಿದಿನ 50 ರಿಂದ 100 ಮಿ.ಲೀ. ಪಾನಕವನ್ನು ಸೇವಿಸಬಹುದು. ಹುಣಸೆ ಹಣ್ಣು(100 ಗ್ರಾಂ), ಬೆಲ್ಲದ‌ ಪುಡಿ(400 ಗ್ರಾಂ), ಜೀರಿಗೆ ಪುಡಿ(10 ಗ್ರಾಂ), ಕಾಳು ಮೆಣಸಿನ‌ಪುಡಿ(5 ಗ್ರಾಂ) ಹಾಗೂ ಸೈಂದವ ಲವಣ(5 ಗ್ರಾಂ) ಬಳಸಿಕೊಂಡು ಪಾನಕ ತಯಾರಿಸಬಹುದು. ಹುಣಸೆ ಹಣ್ಣು ರಾತ್ರಿಯಿಡೀ ನೆನೆಸಿಡಬೇಕು; ಮರುದಿನ ಬೆಳಿಗ್ಗೆ ಕೈಯಿಂದ ಹಿಸುಕಿ ಬಾಟಲಿಗಳಲ್ಲಿ ಸೋಸಿಟ್ಟುಕೊಂಡು ಪಾನಕ‌ ತಯಾರಿಕೆಗೆ ಬೇಕಾದಷ್ಟು‌ ಬಳಸಬಹುದು. ಅಗತ್ಯ ಪ್ರಮಾಣದ ನೀರನ್ನು ಪಾತ್ರೆಗೆ ಹಾಕಿ ಹುಣಸೆ ಹಣ್ಣುನ ಮಿಶ್ರಣವನ್ನು ಬೆರೆಸಿ ಇದರೊಂದಿಗೆ ಬೆಲ್ಲದ ಪುಡಿಯನ್ನು ಹಾಕಿ ಕರಗಿಸಬೇಕು. ಕೊನೆಯಲ್ಲಿ ನಿರ್ದಿಷ್ಟ ಪ್ರಮಾಣದಲ್ಲಿ ಜೀರಿಗೆ ಪುಡಿ, ಕಾಳು‌ಮೆಣಸಿನ ಪುಡಿ ಮತ್ತು ಸೈಂದವ ಲವಣವನ್ನು ಸೇರಿಸಿದರೆ ಪಾನಕ ಸಿದ್ಧವಾಗುತ್ತದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ